ಕೆಆರ್ ಪುರದಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ.

ಸ್ಥಳೀಯ ಸುದ್ದಿ

ಧರ್ಮ ಬಸವನಪುರ.

9/19/20251 min read

ಕೆಆರ್ ಪುರ: ಶ್ರೀ ಲಕ್ಷ್ಮೀ ಗ್ರೂಪ್ ಆಫ್ ಹಾಸ್ಪಿಟಲ್‌ ‌ವತಿಯಿಂದ ಕೆ.ಆರ್.ಪುರದಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಇದೇ ನಾಳೆ ಸೆ.20 ರಂದು ಆಯೋಜಿಸಲಾಗಿದ್ದು, ಬಡ ಜನತೆ ಶಿಬಿರವನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ಆಸ್ಪತ್ರೆಯ ಚೇರ್ಮನ್ ಸಾಂಬಶಿವ ಅವರು ತಿಳಿಸಿದರು.

ಕಳೆದ ಹತ್ತು ವರ್ಷಳಿಂದ ಪ್ರತಿ ವರ್ಷ ಶ್ರೀ ಲಕ್ಷ್ಮೀ ಗ್ರೂಪ್ ಆಫ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ಶಿಬಿರವನ್ನ ಆಯೋಜನೆ ಮಾಡುತ್ತಾ ಬರುತ್ತಿದೆ.

ಸಾರ್ವಜನಿಕರಲ್ಲಿ ಸಣ್ಣ ಪುಟ್ಟ ರೋಗ ಲಕ್ಷಣಗಳು ಕಂಡು ಬಂದಲ್ಲಿ ಸಮಸ್ಯೆಯ ಪ್ರಾಥಮಿಕ ಹಂತದಲ್ಲೇ ವೈದ್ಯರನ್ನು ಕಾಣಬೇಕು. ಜನರಿಗಾಗಿಯೇ ಇಂತಹ ಆರೋಗ್ಯ ಉಚಿತ ತಪಾಸಣೆ ಶಿಬಿರ ಆಯೋಜಿಸಿದ್ದು, ರೋಗ ಲಕ್ಷಣ ಇರುವವವರು ಭಯ ಪಡದೇ ಇಂತಹ ಶಿಬಿರಗಳ ಸದುಪಯೋಗ ಪಡೆದು ಆರೋಗ್ಯವಂತರಾಗಬೇಕು ಎಂದು ಸಲಹೆ ನೀಡಿದರು.

ನಾಳೆ ನಡೆಯುವ ಉಚಿತ ಶಿಬಿರದಲ್ಲಿ ನರರೋಗ, ಮೂತ್ರಪಿಂಡ, ಮೂತ್ರಕೋಶ, ಹೃದಯಭಾಗ, ಕ್ಯಾನ್ಸರ್ ರೋಗ, ಮೂಳೆ, ಮಧುಮೇಹ, ಮಕ್ಕಳ ಚಿಕಿತ್ಸೆ ಸೇರಿದಂತೆ ವಿವಿಧ ರೋಗಗಳ ಉಚಿತ ತಪಾಸಣೆ ನಡೆಯಲಿದ್ದು ಉತ್ತಮ ಆರೋಗ್ಯ ಸಮಾಜ ನಿರ್ಮಾಣಕ್ಕೆ ಸಹಕರಿಸಬೇಕೆಂದು ತಿಳಿಸಿದರು.

ಶಿಬಿರದಲ್ಲಿ ನುರಿತ ತಜ್ಞ ವೈದ್ಯರ ತಂಡ ಭಾಗವಹಿಸಲಿದ್ದು,ಇದು ಸಾರ್ವಜನಿಕರಿಗೆ ಹೆಚ್ಚು ಅನುಕೂಲಕರವಾಗಿದೆ ಎಂದು ಹೇಳಿದರು.

ಆರೋಗ್ಯ ಕೈಕೊಟ್ಟಾಗ ದುಡಿದ ಹಣ ಒಯ್ದು ಸುರಿಯುತ್ತೇವೆ. ಅಧಿಕ ರಕ್ತದೊತ್ತಡ, ಸಕ್ಕರೆ ಕಾಯಿಲೆ, ಹೃದಯಾಘಾತದಂತಹ ರೋಗಗಳು ಹೆಚ್ಚುತ್ತಿವೆ. ಆರೋಗ್ಯದತ್ತ ಪ್ರತಿಯೊಬ್ಬರೂ ಕಾಳಜಿ ವಹಿಸಬೇಕು.ಜನರಲ್ಲಿ ತಡೆಗಟ್ಟುವ ಆರೋಗ್ಯ ಸೇವೆಯ ಮಹತ್ವವನ್ನು ತಿಳಿಸುವ ಉದ್ದೇಶದಿಂದ ಶ್ರೀ ಲಕ್ಷ್ಮಿ ಆಸ್ಪತ್ರೆ ನಿಯಮಿತವಾಗಿ ಇಂತಹ ಶಿಬಿರಗಳನ್ನು ಆಯೋಜಿಸುತ್ತಿದೆ‌ ಎಂದು ಆಸ್ಪತ್ರೆಯ ಸಿಇಒ ರಾಘವೇಂದ್ರ ಸುಂಟ್ರಳ್ಳಿ ತಿಳಿಸಿದರು.

ಈ ಸಂದರ್ಭದಲ್ಲಿ ಮುಖ್ಯಸ್ಥರಾದ ಜಯಮಾಲಾ ,ಆಸ್ಪತ್ರೆಯ ಆಸ್ಪತ್ರೆಯ ಸಿಇಒ ರಾಘವೇಂದ್ರ ಸುಂಟ್ರಳ್ಳಿ, ಆಸ್ಪತ್ರೆಯ ವೈದ್ಯಕೀಯ ಸಿಬ್ಬಂದಿ ಇದ್ದರು.