ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ ಖುದ್ದು ಪರಿಶೀಲನೆ ನಡೆಸಿದ ಸಚಿವ ಕೆ.ಹೆಚ್ ಮುನಿಯಪ್ಪ.

ಸ್ಥಳೀಯ ಸುದ್ದಿ

ಧರ್ಮ ಬಸವನಪುರ.

9/27/20251 min read

ಬೆಂ ಗ್ರಾ ಜಿಲ್ಲೆ: ದೇವನಹಳ್ಳಿ ತಾಲ್ಲೂಕಿನ ಕುಂದಾಣ ಗ್ರಾಮದಲ್ಲಿ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಹಮ್ಮಿಕೊಂಡಿರುವ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಯನ್ನು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಖುದ್ದು ಮನೆಮನೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬಳಿಕ ಮಾತನಾಡಿ, ಸಾರ್ವಜನಿಕರು ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಗೆ ಸಮರ್ಪಕವಾದ ಮಾಹಿತಿ ನೀಡಿ ಗಣತಿದಾರರಿಗೆ ಸಹಕರಿಸಿ, ಇನ್ನೂ ಆಧಾರ್ ಕಾರ್ಡ್ ಗೆ ಮೊಬೈಲ್ ನಂಬರ್ ಲಿಂಕ್ ಮಾಡಿಲ್ಲದವರು ಲಿಂಕ್ ಮಾಡಿಕೊಳ್ಳಬೇಕು. ಹಾಗೇ ಅಗತ್ಯ ದಾಖಲೆಗಳಿಗೆ ಕೆವೈಸಿ ಲಿಂಕ್ ಮಾಡುವುದು ಕಡ್ಡಾಯವಾಗಿದ್ದು ಇ-ಕೈವೈಸಿ ಮಾಡಿಕೊಳ್ಳಲು ಸಾರ್ವಜನಿಕರಿಗೆ ತಿಳಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಎ.ಬಿ ಬಸವರಾಜು, ದೇವನಹಳ್ಳಿ ಪುರಸಭೆಯ ಅಧ್ಯಕ್ಷರು ಡಿ.ಎಂ ಮುನಿಕೃಷ್ಣ, ತಾಲ್ಲೂಕು ಗ್ಯಾರಂಟಿ ಅಧ್ಯಕ್ಷರು ಸಿ ಜಗನ್ನಾಥ್, ಬಯಪ ಅಧ್ಯಕ್ಷರು ಶಾಂತಕುಮಾರ್, ತಹಶೀಲ್ದಾರ್ ಅನಿಲ್ ಎಂ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಕೆ.ಸಿ ಮಂಜುನಾಥ್, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.