ದೊಡ್ಡಬಳ್ಳಾಪುರದ ಎಂ.ಆರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ಸ್ಥಳೀಯ ಸುದ್ದಿ

ರಾಘವೇಂದ್ರ ಹೆಚ್.ಎ

1/12/20261 min read

ದೊಡ್ಡಬಳ್ಳಾಪುರ: ಇಲ್ಲಿನ ನಿಸರ್ಗ ಯೋಗ ಕೇಂದ್ರದ ಯೋಗಪಟು ಎಂ. ಆರ್. ಜಾಹ್ನವಿ (M.R. Jahnavi) ಅವರಿಗೆ ಧಾರವಾಡದ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ವತಿಯಿಂದ 2023-24ನೇ ಸಾಲಿಗೆ ನೀಡಲಾಗುವ ಅಕಾಡೆಮಿ ಬಾಲ ಗೌರವ ಪ್ರಶಸ್ತಿ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿಯನ್ನು ನೀಡಲಾಗಿದೆ.

ಇಂದು ಬೆಳಗಾವಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ಅವರು ಪ್ರಶಸ್ತಿ ಪ್ರದಾನ ಮಾಡಿದರು.

ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ.ಅ.ಬಬಲೇಶ್ವರ ಮೊದಲಾದವರು ಹಾಜರಿದ್ದರು.