Nelamangala: ಭೀಕರ ಸರಣಿ ಅಪಘಾತ, ಓರ್ವ ಮಹಿಳೆ ಸ್ಥಳದಲ್ಲೇ ಸಾವು

ಸ್ಥಳೀಯ ಸುದ್ದಿ

ರಾಘವೇಂದ್ರ ಹೆಚ್​.ಎ

4/7/20251 min read

ನೆಲಮಂಗಲ : ತಾಲ್ಲೂಕಿನ ಬೂದಿಹಾಳ್​ ಗೇಟ್​ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿಂದು ಬೆಳಗ್ಗೆ ಎರಡು ಲಾರಿ ಮತ್ತು ಟಾಟಾ ಎಸ್ ಗಾಡಿಗಳ ನಡುವೆ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಒರ್ವ ಮಹಿಳೆ ಸಾವನ್ನಪ್ಪಿದ್ದಾರೆ, ಇಬ್ಬರು ಗಾಯಗೊಂಡಿದ್ದಾರೆ, ಒಬ್ಬರ ಸ್ಥಿತಿ ಚಿಂತಾಜನಕವಾಗಿದೆ.

ಘಟನೆಯಲ್ಲಿ ತ್ರಿವೇಣಿ (25) ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ, ಶಿವಕುಮಾರ್ ಸ್ಥಿತಿ ಚಿಂತಾಜನಕವಾಗಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಮೃತ ಮಹಿಳೆ ಕುಟುಂಬ ಇಂದು ಬೆಳಗ್ಗೆ ಟಾಟಾ ಎಸ್ ವಾಹನದಲ್ಲಿ ಬೆಂಗಳೂರಿಗೆ ವಾಪಸ್ ಬರುತ್ತಿದ್ದ ವೇಳೆ, ಮುಂಬದಿಯಲ್ಲಿದ್ದ ಲಾರಿ ಸಡನ್ ಬ್ರೇಕ್ ಹಾಕಿದ ಪರಿಣಾಯ ಎರಡು ಲಾರಿ ಮತ್ತು ಟಾಟಾ ಎಸ್ ಸರಣಿ ಅಪಘಾತ ಸಂಭವಿಸಿದೆ, ಟಾಟಾ ಎಸ್ ವಾಹನದಲ್ಲಿಯೇ ಸಿಲುಕಿದ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಅಪಘಾತದಿಂದ ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ನಡುವೆ ಟ್ರಾಫಿಕ್ ಉಂಟಾಗಿ ವಾಹನ ಸವಾರರು ಪರದಾಡುವಂತಾಗಿತು, ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ