ನೆಲಮಂಗಲ: ಬೈಕ್ ಗೆ ಲಾರಿ ಡಿಕ್ಕಿ: ಅಪಘಾತದಲ್ಲಿ ಇಬ್ಬರು ಡ್ಯಾನ್ಸರ್ಸ್​ ಸ್ಥಳದಲ್ಲೇ ಸಾವು.

ಕ್ರೈಮ್ಸ್ಥಳೀಯ ಸುದ್ದಿ

ಧರ್ಮ ಬಸವನಪುರ

6/16/20251 min read

ನೆಲಮಂಗಲ: ನೆಲಮಂಗಲದ ಕುಣಿಗಲ್ ಬೈಪಾಸ್​ನಲ್ಲಿ ಬೈಕ್ ಗೆ ಲಾರಿಯೊಂದು ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತದಲ್ಲಿ ಬೈಕ್ ನಲ್ಲಿದ್ದ ಇಬ್ಬರು ಡ್ಯಾನ್ಸರ್ಸ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮೃತರನ್ನು ಬೆಂಗಳೂರಿನ ಶ್ರೀರಾಮಪುರದ ಪ್ರಜ್ವಲ್(22) ಮತ್ತು ಸಹನಾ(21) ಎಂದು ಗುರುತಿಸಲಾಗಿದೆ.

ಕುಣಿಗಲ್‌ನಲ್ಲಿ ನಡೆದ ಒಂದು ಕಾರ್ಯಕ್ರಮದ ಹಣವನ್ನು ಸಂಗ್ರಹಿಸಲು ಬಂದಿದ್ದರು. ಹಣ ಪಡೆದು ಬೆಂಗಳೂರಿಗೆ ಬೈಕ್‌ನಲ್ಲಿ ವಾಪಸ್ ಆಗುತ್ತಿದ್ದಾಗ, ವೇಗವಾಗಿ ಬಂದ ಲಾರಿಯೊಂದು ಅವರ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಈ ಡಿಕ್ಕಿಯ ತೀವ್ರತೆಯಿಂದ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ ತಿಳಿದುಬಂದಿದೆ.

ಪ್ರಜ್ವಲ್ ಕೆಲವು ಸಿನಿಮಾ ಮತ್ತು ಇವೆಂಟ್​ಗಳಲ್ಲಿ ನೃತ್ಯ ಮಾಡಿದ್ದಾರೆ. ಸಹನಾ ಕೂಡ ಡ್ಯಾನ್ಸರ್​​ ಆಗಿದ್ದಾರೆ. ಇಬ್ಬರು ಮದುವೆ ಇವೆಂಟ್​​ ಒಂದನ್ನು ಮುಗಿಸಿಕೊಂಡು ಕುಣಿಗಲ್​ನಿಂದ ಬೆಂಗಳೂರಿಗೆ ವಾಪಸಾಗುತ್ತಿದ್ದ ವೇಳೆ ಈ ಭೀಕರ ಅಪಘಾತ ಸಂಭವಿಸಿದೆ.ಅಪಘಾತದ ನಂತರ ಲಾರಿ ಜಪ್ತಿ ಮಾಡಿ ಚಾಲಕನನ್ನು ವಶಕ್ಕೆ ಪಡೆಯಲಾಗಿದೆ.ಲಾರಿಯ ವೇಗವಾಗಿ ಚಲಿಸುವಿಕೆಯೇ ಈ ದುರಂತಕ್ಕೆ ಪ್ರಮುಖ ಕಾರಣವೆಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.