ಜಿಬಿಎ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವುದು ನಮ್ಮ ಗುರಿ
ಸ್ಥಳೀಯ ಸುದ್ದಿ


ಕೆ.ಆರ್.ಪುರ: ಬೆಂಗಳೂರು ಪೂರ್ವ ಜಿಬಿಎ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವುದು ನಮ್ಮ ಕಾಂಗ್ರೆಸ್ ಪಕ್ಷದ ಗುರಿಯಾಗಿದೆ ಎಂದು ಪೂರ್ವ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಮೋಹನ್ ಅವರು ತಿಳಿಸಿದರು.
ಕೆ.ಆರ್.ಪುರ ಕ್ಷೇತ್ರದ ಭಟ್ಟರಹಳ್ಳಿಯಲ್ಲಿ ಮಾಜಿ ಪಾಲಿಕೆ ಸದಸ್ಯ ವೀರಣ್ಣ ಅವರ ಹುಟ್ಟುಹಬ್ಬಕ್ಕೆ ಶುಭಕೋರಿ ಮಾತನಾಡಿದರು.
ಬೆಂಗಳೂರು ಪೂರ್ವ ಪಾಲಿಕೆ ಕಾಂಗ್ರೆಸ್ ಪಕ್ಷದ ಭದ್ರಕೋಟೆಯಾಗಿದ್ದು, ಇತ್ತೀಚಿನ ಕೆಲವು ವರ್ಷಗಳಿಂದ ಹಿನ್ನಡೆ ಉಂಟಾಗಿದೆ ಅದನ್ನು ಸರಿಪಡಿಸುವ ಮೂಲಕ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕಾಗಿದೆ ಎಂದರು.
ಕೆ.ಆರ್.ಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಹಿಂದಿನಂತೆ ಪ್ರಬಲವಾಗಿದ್ದು,ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಮಾರ್ಗದರ್ಶನದಲ್ಲಿ ಇತಿಹಾಸ ಸೃಷ್ಟಿಸಲಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಾಜಿ ಪಾಲಿಕೆ ಸದಸ್ಯ ವೀರಣ್ಣ, ರಾಧಮ್ಮ ವೆಂಕಟೇಶ್,ಬಂಡೆರಾಜು,ಮುಖಂಡರಾದ ಅಗರ ಆರ್.ಪ್ರಕಾಶ್,ಸುರೇಶ್ ಬಾಸ್ಕೋ,ಸೈಯದ್ ಮುಜಮಿಲ್ ಮಸ್ತಾನ್,ಭಟ್ಟರಹಳ್ಳಿ ಮುನೇಗೌಡ,ಕೇಶವ,ವಿನೋದ್,ಅನೀಲ್ ಇದ್ದರು.