ಸವಿತಾ ಸಮಾಜದ ಬಗ್ಗೆ ಅವಹೇಳನಕಾರಿ ಪದ ಬಳಕೆ: ಸಿ.ಟಿ. ರವಿ ವಿರುದ್ಧ ಆಕ್ರೋಶ
ಸ್ಥಳೀಯ ಸುದ್ದಿ


ಮಹದೇವಪುರ: ಸವಿತಾ ಸಮಾಜದ ವಿರುದ್ಧ ಬಿಜೆಪಿ ಮುಖಂಡ ಸಿ.ಟಿ. ರವಿ ಅಕ್ಷೇಪಕಾರಿ ಪದಬಳಕೆ ಮಾಡಿ ಅವಮಾನಕಾರಿ ಹೇಳಿಕೆ ನೀಡಿರುವುದು ಖಂಡನೀಯ ಎಂದು ಕಾಂಗ್ರೆಸ್ ಬೆಂ.ಪೂರ್ವ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಮುಖಂಡ ಕುಪ್ಪಿ ಮಂಜುನಾಥ ತಿಳಿಸಿದರು.
ಸವಿತಾ ಸಮಾಜದ ಬಗ್ಗೆ ಅವಹೇಳನಕಾರಿ ಪದ ಬಳಕೆ ಆರೋಪದಡಿ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರನ್ನು ಬಂಧಿಸಬೇಕೆಂದು ಆರೋಪಿಸಿ ಬೆಂಗಳೂರು ಪೂರ್ವ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳವತಿಯಿಂದ ವರ್ತೂರಿನ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಮಾತನಾಡಿದರು.
ಸವಿತಾ ಸಮಾಜ ಅತ್ಯಂತ ಶ್ರಮಿಕ ವರ್ಗವಾಗಿದ್ದು, ಅವರ ವೃತ್ತಿಗೆ ಪಾರಂಪರಿಕ ಮನ್ನಣೆ ಇದೆ. ಅವರನ್ನು ಅವಮಾನಿಸಿ ಮಾತನಾಡುವುದು ರವಿ ಅವರಿಗೆ ಶೋಭೆ ತರುವುದಿಲ್ಲ. ಕೂಡಲೇ ಸಿಟಿ ರವಿಯವರು ತನ್ನ ತಪ್ಪು ಒಪ್ಪಿಕೊಂಡು ಬಹಿರಂಗವಾಗಿ ಕ್ಷಮೆ ಯಾಚಿಸಬೇಕು ಎಂದು ಒತ್ತಾಯಿಸಿದರು.ಸರ್ಕಾರ ಅವರ ಹೇಳಿಕೆ ಪರಿಶೀಲಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು
ಸದ್ಯ ಕಾಂಗ್ರೆಸ್ ಪಕ್ಷದ ನಾಯಕರು ಕೂಡ ಸಿಟಿ ರವಿ ವಿರುದ್ಧ ಮುಗಿಬಿದ್ದಿದ್ದರು. ಈ ಬಗ್ಗೆ ಕಾಂಗ್ರೆಸ್ ಬೆಂ.ಪೂರ್ವ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಮುಖಂಡ ಕುಪ್ಪಿ ಮಂಜುನಾಥ ಪ್ರತಿಭಟನೆ ನಡೆಸಿ ವರ್ತೂರು ಪೋಲಿಸ್ ಠಾಣೆಯಲ್ಲಿ ದೂರು ನೀಡಿದ್ದರು.
ಈ ಸಂದರ್ಭದಲ್ಲಿ ಸವಿತಾ ಸಮಾಜದ ಗೌರವ ಅಧ್ಯಕ್ಷ ಕೃಷ್ಣಪ್ಪ, ಬೆಂ.ಪೂರ್ವ ತಾಲ್ಲೂಕಿನ ಗ್ಯಾರೆಂಟಿ ಅಧ್ಯಕ್ಷ ಸುರೇಶ್, ಮುಖಂಡರಾದ ಇಕ್ಬಾಲ್ ಅಹಮದ್ ವಿ ವಿಜಯ್ ಕುಮಾರ್, ಮುನಿರಾಜು ಮತ್ತಿತರರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.