ಸಂಯಮ ಸಾಕು, ಪ್ರತಿಕ್ರಿಯೆ ಬೇಕು: ದಾಳಿ ಕುರಿತು ಕಿಚ್ಚ ಸುದೀಪ್ ಖಡಕ್ ಪೋಸ್ಟ್
ದೇಶ/ವಿದೇಶ


ಬೆಂಗಳೂರು: ಮಂಗಳವಾರ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ನಡೆದ ಉಗ್ರರ ದಾಳಿಯಲ್ಲಿ ಮೂವರು ಕನ್ನಡಿಗರು ಸೇರಿದಂತೆ 28 ಮಂದಿ ಮೃತಪಟ್ಟಿದ್ದಾರೆ. ಈ ಕುರಿತು ಸ್ಯಾಂಡಲ್ವುಡ್ ಸ್ಟಾರ್ ಕಿಚ್ಚ ಸುದೀಪ್ ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.
ಉಗ್ರರ ದಾಳಿಯ ಕುರಿತು ತಮ್ಮ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ನಟ ಕಿಚ್ಚ ಸುದೀಪ್ ಅವರು, ಈ ಹೇಯ ಕೃತ್ಯದಲ್ಲಿ ಭಾಗಿಯಾದವರನ್ನು ಶಿಕ್ಷಿಸುವಂತೆ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರಿಗೆ ಮನವಿ ಮಾಡಿದ್ದಾರೆ.
'ಪಹಲ್ಕಾಮ್‌ನಲ್ಲಿ ಮುಗ್ಧ ಪ್ರವಾಸಿಗರ ಮೇಲೆ ದಾಳಿ ನಡೆಸಿರುವುದನ್ನು ಕಂಡು ನೋವಾಗಿದೆ. ಇದು ಕೇವಲ ವ್ಯಕ್ತಿಗಳ ಮೇಲಿನ ದಾಳಿಯಲ್ಲ, ಬದಲಾಗಿ ನಮ್ಮ ರಾಷ್ಟ್ರದ ಚೈತನ್ಯದ ಮೇಲಿನ ದಾಳಿ. ಇದು ಸಂಯಮದಿಂದ ಕೂರುವ ಸಮಯವಲ್ಲ, ಬಲವಾದ ಮತ್ತು ಸ್ಪಷ್ಟವಾದ ಪ್ರತಿಕ್ರಿಯೆ ನೀಡುವ ಸಮಯ' ಎಂದಿದ್ದಾರೆ.
ಇನ್ನು ಇದೇ ವಿಚಾರವಾಗಿ ಸ್ಯಾಂಡಲ್ ಸ್ಟಾರ್ಸ್ ಅಷ್ಟೇ ಅಲ್ಲದೇ ಭಾರತ ಚಿತ್ರರಂಗದ ಗಣ್ಯರೂ ಕೂಡ ಖಡಕ್ ಆಗಿ ಪ್ರತಿಕ್ರಿಯೇ ನೀಡಿದ್ದಾರೆ.

