ಧಾರವಾಡದಲ್ಲಿ ಪ್ಯಾರಾಮೆಡಿಕಲ್ ವಿದ್ಯಾರ್ಥಿನಿ ಹತ್ಯೆ, ಮೃತದೇಹವನ್ನು ಪೀಸ್ ಮಾಡಿ ಎಸೆದ ರಾಕ್ಷಸರು..!

ಜಿಲ್ಲಾ ಸುದ್ದಿ

ಧರ್ಮ ಬಸವನಪುರ.

1/21/20261 min read

ಧಾರವಾಡ : ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಕೃತ್ಯವೊಂದು ನಡೆದಿದ್ದು,ಪ್ರಕರಣ ಬೆಳಕಿಗೆ ಬಂದಿದೆ. 19 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿನಿಯನ್ನು ದುಷ್ಕರ್ಮಿಗಳು ಹತ್ಯೆ ಮಾಡಿ ನಗರದ ಹೊರವಲಯದಲ್ಲಿ ಎಸೆದು ಪರಾರಿಯಾಗಿರುವ ಘಟನೆ ಇಡೀ ಜಿಲ್ಲೆಯನ್ನು ಬೆಚ್ಚಿಬೀಳಿಸಿದೆ.

ಝಕಿಯಾ ಎಂಬ ಮುಸ್ಲಿಂ ಯುವತಿಯ ಕೊಲೆಯಾಗಿದ್ದು, ಈಕೆ ಧಾರವಾಡದ ಗಾಂಧಿ ಚೌಕ್ ಬಡಾವಣೆಯ ನಿವಾಸಿ ಎಂದು ಗುರುತಿಸಲಾಗಿದೆ.

ಮೃತ ವಿದ್ಯಾರ್ಥಿನಿ ಧಾರವಾಡದ ಗಾಂಧಿ ಚೌಕ್ ನಿವಾಸಿಯಾಗಿದ್ದ 19 ವರ್ಷದ ಝಕಿಯಾ ಮುಲ್ಲಾ ಎಂದು ತಿಳಿದುಬಂದಿದೆ. ಮಂಗಳವಾರ ಸಂಜೆ ಮನೆಯಿಂದ ಲ್ಯಾಬ್‌ಗೆ ಹೋಗಿ ಬರುವುದಾಗಿ ಹೇಳಿ ತೆರಳಿದ್ದ ವಿದ್ಯಾರ್ಥಿನಿ, ರಾತ್ರಿಯಾದರೂ ಮನೆಗೆ ಹಿಂದಿರುಗಿರಲಿಲ್ಲ. ಇದರಿಂದ ಆತಂಕಗೊಂಡ ಕುಟುಂಬಸ್ಥರು ಹುಡುಕಾಟ ನಡೆಸುತ್ತಿದ್ದರು. ಇಂದು ಮುಂಜಾನೆ ಮನಸೂರು ರಸ್ತೆಯ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಸೇರಿದ ವಿನಯ್ ಡೈರಿ ಸಮೀಪ ವಿದ್ಯಾರ್ಥಿನಿಯ ಶವ ಪತ್ತೆಯಾಗಿದೆ.

ಬೇರೆ ಕಡೆ ವಿದ್ಯಾರ್ಥಿನಿಯನ್ನು ಕೊಲೆ ಮಾಡಿ, ನಂತರ ಸಾಕ್ಷ್ಯ ನಾಶಪಡಿಸುವ ಉದ್ದೇಶದಿಂದ ಇಲ್ಲಿಗೆ ತಂದು ಶವವನ್ನು ಬಿಸಾಡಿ ಹೋಗಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಧಾರವಾಡ ಗ್ರಾಮೀಣ ಹಾಗೂ ವಿದ್ಯಾಗಿರಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಮರಣೋತ್ತರ ಪರೀಕ್ಷೆ ವರದಿ ಕೊಲೆ ಕುರಿತಂತೆ ಹೆಚ್ಚಿನ ಮಾಹಿತಿ ತಿಳಿಯಲಿದೆ. ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.