Power Cut : ದೊಡ್ಡಬಳ್ಳಾಪುರ ನಗರದ ವಿವಿಧೆಡೆ ಇಂದು ವಿದ್ಯುತ್ ಪೂರೈಕೆ ವ್ಯತ್ಯಯ
ಸ್ಥಳೀಯ ಸುದ್ದಿ


ದೊಡ್ಡಬಳ್ಳಾಪುರ ನಗರದ ಹಲವೆಡೆ ಇಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ನಗರದ ಹೊರವಲಯದಲ್ಲಿರುವ ಕೆಐಎಡಿಬಿ ವಿದ್ಯುತ್ ಕೇಂದ್ರದಿಂದ ಹೊರಹೊಮ್ಮುವ F02 Birla super ಫೀಡರ್ ಮಾರ್ಗದಲ್ಲಿ ಮಾರ್ಗದಲ್ಲಿ ವಾಹಕ ಬದಲಾವಣೆ ಕಾಮಗಾರಿಯನ್ನು ಕೈಗೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಈ ಮಾರ್ಗದಲ್ಲಿ ಇಂದು (ಏ. 10) ಬೆಳಿಗ್ಗೆ 10 ಗಂಟೆ ಇಂದ ಸಂಜೆ 06 ಗಂಟೆವರೆಗೆ ವಿದ್ಯುತ್ ಪೂರೈಕೆ ವ್ಯತ್ಯಯವಾಗಲಿದೆ. ಬೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ.
ಈ ಮಾಹಿತಿಯಂತೆ ನಗರದ ತೇರಿನ ಬೀದಿ, ರಂಗಪ್ಪ ಸರ್ಕಲ್, ತೂಬರೆಗೆ ಪೇಟೆ, ಚೌಡೇಶ್ವರಿ ಬೀದಿ, ಬ್ರಾಹ್ಮಣರ ಬೀದಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವ್ಯತ್ಯಯ ಉಂಟಾಗಲಿದೆ.

