ನಾಳೆ ದೊಡ್ಡಬಳ್ಳಾಪುರ ನಗರ ಹಾಗೂ ತಾಲ್ಲೂಕಿನ ಈ ಭಾಗದಲ್ಲಿ ವಿದ್ಯುತ್ ಸ್ಥಗಿತ
ಸ್ಥಳೀಯ ಸುದ್ದಿ


ದೊಡ್ಡಬಳ್ಳಾಪುರ ನಗರ ಸೇರಿದಂತೆ ತಾಲ್ಲೂಕಿನ ಹಲವೆಡೆ ಆಗಸ್ಟ್ 31 ರಂದು ಭಾನುವಾರ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ದೊಡ್ಡಬಳ್ಳಾಪುರ ಬೆಸ್ಕಾಂ ಅಭಿಯಂತರರು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.
ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಆಗಸ್ಟ್ 31 ರಂದು 220/66/11ಕೆವಿ ಕೆಐಎಡಿಬಿ ಹಾಗು 66/11ಕೆವಿ ಅಪೇರಲ್ ಪಾರ್ಕ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ಈ ಉಪಕೇಂದ್ರದಲ್ಲಿರುವ ಎಲ್ಲಾ ವಿದ್ಯುತ್ ಮಾರ್ಗಗಳಲ್ಲಿ ಬೆಳಿಗ್ಗೆ 10:00 ಗಂಟೆ ಇಂದ ಸಂಜೆ 06:00 ಗಂಟೆವರೆಗೆ ವಿದ್ಯುತ್ ವ್ಯತ್ಯಯವಿರುತ್ತದೆ. ಆದ್ದರಿಂದ ಗ್ರಾಹಕರು ಸಹಕರಿಸ ಬೇಕಾಗಿ ಕೋರಲಾಗಿದೆ.
ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು:
ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ಗ್ರಾಮಗಳು, ಕೆಐಎಡಿಬಿ, ಅಪೇರಲ್ ಪಾರ್ಕ್ ಹಂತ 1,2&3, ಕೆಎಸ್‌ಎಸ್‌ಐಡಿಸಿ ಕೈಗಾರಿಕ ಪ್ರದೇಶಗಳು, ಮಜರಾಹೊಸಹಳ್ಳಿ ಗ್ರಾಮ ಪಂಚಹಾಯಿತಿಯ ಗ್ರಾಮಗಳು, ದೊಡ್ಡತುಮಕೂರು ಗ್ರಾಮ ಪಂಚಾಯಿತಿಯ ಗ್ರಾಮಗಳು, ಅರಳುಮಲ್ಲಿಗೆ ಗ್ರಾಮ ಪಂಚಾಯಿತಿಯ ಗ್ರಾಮಗಳು, ದೊಡ್ಡಬಳ್ಳಾಪುರ ನಗರದ ಭುವನೇಶ್ವರಿನಗರ, ತೇರಿನ ಬೀದಿ ಸರ್ಕಲ್, ಸಂಜಯನಗರ, ವೀರಭದ್ರನಪಾಳ್ಯ, ಚೈತನ್ಯನಗರ, ವಿದ್ಯಾನಗರ, ಕನಕದಾಸ ರಸ್ತೆ, ಕುಚ್ಚಪ್ಪನಪೇಟೆ, ಕೊಂಗಾಡಿಯಪ್ಪ ಮುಖ್ಯರಸ್ತೆ, ರಂಗಪ್ಪ ಸರ್ಕಲ್, ಗಾಂಧಿನಗರ, ತೂಬಗೆರೆ ಪೇಟೆ, ಬ್ರಾಹ್ಮಣರ ಬೀದಿ, ಖಾಸಬಾಗ್, ಶ್ರೀನಗರ, ಚಂದ್ರಶೇಖರಪುರ, ರೈಲ್ವೆ ನಿಲ್ದಾಣ, ಅರೇಹಳ್ಳಿ ಗುಡ್ಡದಹಳ್ಳಿ, ಮೂತ್ತೂರು, ಸಿದ್ದೇನಾಯಕನಹಳ್ಳಿ, ಹಾಗು ಸುತ್ತಮುತ್ತಲಿನ ಪ್ರದೇಶಗಳು.
ಪ್ರಜಾ ಭಾರತ್ ನ್ಯೂಸ್ ವೆಬ್ ಪೋರ್ಟಲ್ ವಾಟ್ಸಪ್ ಗ್ರೂಪ್ ಸೇರಲು 👇👇Follow this link to join my WhatsApp group : https://chat.whatsapp.com/Fj6L4Eak7N994zl2QHSpHK

