ದೊಡ್ಡಬಳ್ಳಾಪುರದಲ್ಲಿ ನಾಳೆ ಮೇ.25ರಂದು ವಿದ್ಯುತ್ ಪೂರೈಕೆ ಸ್ಥಗಿತ!
ಸ್ಥಳೀಯ ಸುದ್ದಿ


ದೊಡ್ಡಬಳ್ಳಾಪುರ ನಗರದ ಹಲವೆಡೆ ನಾಳೆ (ಮೇ.25) ರಂದು ವಿದ್ಯುತ್ ಪೂರೈಕೆ ಇರುವುದಿಲ್ಲ ಎಂದು ಬೆಸ್ಕಾಂ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ ನಗರದ ಡಿಕ್ರಾಸ್ ಬಳಿ ಇರುವ ವಿದ್ಯುತ್ ಕೇಂದ್ರದಿAದ ಹೊರಹೊಮ್ಮುವ F0-7-Local-1 ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು ನಡೆಯುವುದರಿಂದ ಈ ಮಾರ್ಗದಲ್ಲಿ ಬೆಳಗ್ಗೆ 10ರಿಂದ ಸಂಜೆ 6ರ ವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಆದ್ದರಿಂದ ಗ್ರಾಹಕರು ಸಹಕರಿಸುವಂತೆ ಕೋರಿದ್ದಾರೆ.
ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು:
ದೊಡ್ಡಬಳ್ಳಾಪುರ ನಗರದ ಕರೇನಹಳ್ಳಿ, ದರ್ಗಾಜೋಗಿಹಳ್ಳಿ, ಜಾಲಪ್ಪ ಕಾಲೇಜು ರಸ್ತೆ, ಕುರುಬರಹಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವ್ಯತ್ಯಯ ಉಂಟಾಗಲಿದೆ.

