ದೊಡ್ಡಬಳ್ಳಾಪುರ ನಗರದ ಹಲವೆಡೆ ನಾಳೆ ವಿದ್ಯುತ್ ಪೂರೈಕೆ ಸ್ಥಗಿತ!
ಸ್ಥಳೀಯ ಸುದ್ದಿ


ದೊಡ್ಡಬಳ್ಳಾಪುರ ನಗರದ ಹಲವೆಡೆ ನಾಳೆ (ಮೇ.26) ರಂದು ವಿದ್ಯುತ್ ಪೂರೈಕೆ ಇರುವುದಿಲ್ಲ ಎಂದು ಬೆಸ್ಕಾಂ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ ನಗರದಲ್ಲಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರಹೊಮ್ಮುವ F02--Birla super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು ನಡೆಯುವುದರಿಂದ ಈ ಮಾರ್ಗದಲ್ಲಿ ಬೆಳಗ್ಗೆ 10ರಿಂದ ಸಂಜೆ 6ರ ವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಆದ್ದರಿಂದ ಗ್ರಾಹಕರು ಸಹಕರಿಸುವಂತೆ ಕೋರಿದ್ದಾರೆ.
ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು:
ದೊಡ್ಡಬಳ್ಳಾಪುರ ನಗರದ ಕುಚ್ಚಪ್ಪನ ಪೇಟೆ, ಕೊಂಗಾಡಿಯಪ್ಪ ಮುಖ್ಯ ರಸ್ತೆ, ವೀರಭದ್ರನಪಾಳ್ಯ, ಭುವನೇಶ್ವರಿ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವ್ಯತ್ಯಯ ಉಂಟಾಗಲಿದೆ.

