ನಾಳೆ ಈ ಭಾಗದಲ್ಲಿ ವಿದ್ಯುತ್ ಪೂರೈಕೆ ಸ್ಥಗಿತ
ಸ್ಥಳೀಯ ಸುದ್ದಿ


ದೊಡ್ಡಬಳ್ಳಾಪುರ ನಗರದ ಹಲವೆಡೆ ನಾಳೆ (ಜೂನ್.3) ರಂದು ವಿದ್ಯುತ್ ಪೂರೈಕೆ ಇರುವುದಿಲ್ಲ ಎಂದು ಬೆಸ್ಕಾಂ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ ನಗರದಲ್ಲಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರಹೊಮ್ಮುವ F02--Birla super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು ನಡೆಯುವುದರಿಂದ ಈ ಮಾರ್ಗದಲ್ಲಿ ಬೆಳಗ್ಗೆ 10ರಿಂದ ಸಂಜೆ 6ರ ವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಆದ್ದರಿಂದ ಗ್ರಾಹಕರು ಸಹಕರಿಸುವಂತೆ ಕೋರಿದ್ದಾರೆ.
ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು:
ದೊಡ್ಡಬಳ್ಳಾಪುರ ನಗರದ ಕುಚ್ಚಪ್ಪನ ಪೇಟೆ, ನಗರ್ತರ ಪೇಟೆ, ಕೊಂಗಾಡಿಯಪ್ಪ ಮುಖ್ಯ ರಸ್ತೆ, ಸಂಜಯ್ ನಗರ, ವೀರಭದ್ರನಪಾಳ್ಯ, ಭುವನೇಶ್ವರಿ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವ್ಯತ್ಯಯ ಉಂಟಾಗಲಿದೆ.