ಜಾಲಪ್ಪ ಲಯನ್ಸ್‌ ಸಂಸ್ಥೆ ಅಧ್ಯಕ್ಷರಾಗಿ ಪ್ರೊ.ರವಿಕಿರಣ್; ಗುರುವಾರ ಪದಗ್ರಹಣ

ಸ್ಥಳೀಯ ಸುದ್ದಿ

ರಾಘವೇಂದ್ರ ಹೆಚ್​.ಎ

6/25/20251 min read

ದೊಡ್ಡಬಳ್ಳಾಪುರ: ಇಲ್ಲಿನ ಲಯನ್ಸ್‌ ಕ್ಲಬ್‌ ಆಫ್‌ ದೊಡ್ಡಬಳ್ಳಾಪುರ ಆರ್.ಎಲ್.ಜಾಲಪ್ಪ ಇನ್ಸ್‌ಟಿಟ್ಯೂಷನ್ಸ್‌ನ 2025-26ನೇ ಸಾಲಿನ ನೂತನ ಅಧ್ಯಕ್ಷರಾಗಿ ಪ್ರೊ.ರವಿಕಿರಣ್ ಕೆ.ಆರ್ ನಿಯೋಜಿತರಾಗಿದ್ದು, ನೂತನ ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಇಂದು ಸಂಜೆ 6 ಗಂಟೆಗೆ ಆರ್‌.ಎಲ್.ಜಾಲಪ್ಪ ಕಾಲೇಜು ಕ್ಯಾಂಪಸ್‌ನ ಎಸ್‌ಡಿಯುಐಆರ್‌ಎಸ್‌ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

ಲಯನ್ಸ್‌ ಜಿಲ್ಲೆ 317ಎಫ್‌ನ ನಿಕಟಪೂರ್ವ ರಾಜ್ಯಪಾಲ ಬಿ.ಎಸ್.ನಾಗರಾಜ್‌ ಅವರು ಪ್ರತಿಜ್ಞಾ ವಿಧಿ ಬೋಧಿಸಲಿದ್ದಾರೆ. ಕ್ಲಬ್‌ ಅಧ್ಯಕ್ಷ ಜೆ.ಆರ್.ರಾಕೇಶ್‌ ಅಧ್ಯಕ್ಷತೆ ವಹಿಸಲಿದ್ದು, ಎಸ್‌ಡಿಯುಇಟಿ ಉಪಾಧ್ಯಕ್ಷ ಜೆ.ರಾಜೇಂದ್ರ ಗೌರವ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.