PUC Exam Result: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಫೇಲ್! ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

ರಾಜ್ಯಜಿಲ್ಲಾ ಸುದ್ದಿ

ರಾಘವೇಂದ್ರ ಹೆಚ್​.ಎ

4/8/20251 min read

ಮೈಸೂರು: ಇಂದು ಪ್ರಕಟವಾದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಮನನೊಂದ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರಿನ ಕಲಾಮಂದಿರ ಅಪಾರ್ಟೆಂಟ್‌ನಲ್ಲಿ ಈ ದುರಂತ ಸಂಭವಿಸಿದೆ.

ಐಶ್ವರ್ಯ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಒಂಟಿಕೊಪ್ಪಲಿನ ಸರ್ಕಾರಿ ಪಿಯು ಕಾಲೇಜಿನಲ್ಲಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ಈಕೆ, ಇಂದು ಪ್ರಕಟಗೊಂಡ ಫಲಿತಾಂಶದಲ್ಲಿ ಫೇಲ್ ಆದ ಹಿನ್ನೆಲೆಯಲ್ಲಿ ಮನನೊಂದ ವಿದ್ಯಾರ್ಥಿನಿ ಐಶ್ವರ್ಯ, ಮನೆಯಲ್ಲಿ ಯಾರೊಬ್ಬರೂ ಇಲ್ಲದ ಸಮಯ ನೋಡಿಕೊಂಡು ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಘಟನೆಯಿಂದ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ಇತ್ತೀಚಿನ ಸುದ್ದಿ