ROOF COLLAPSES: ನೈಟ್‌ಕ್ಲಬ್‌ನ ಛಾವಣಿ ಕುಸಿದು ಕನಿಷ್ಠ 79 ಮಂದಿ ದಾರುಣ ಸಾವು
ದೇಶ/ವಿದೇಶ


ಸ್ಯಾಂಟೊ ಡೊಮಿಂಗೊ: ಡೊಮಿನಿಕನ್ ರಾಜಧಾನಿಯಲ್ಲಿ ಮಂಗಳವಾರ ಐಕಾನಿಕ್ ನೈಟ್‌ಕ್ಲಬ್‌ನ ಛಾವಣಿ ಕುಸಿದಿದ್ದರಿಂದ ಕನಿಷ್ಠ 79 ಜನರು ಸಾವನ್ನಪ್ಪಿದ್ದಾರೆ. ಈ ದುರಂತದಲ್ಲಿ ಸುಮಾರು 160ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಪ್ರತಿಷ್ಠಿತ ನೈಟ್ ಕ್ಲಬ್ ನಲ್ಲಿ ನಡೆಯುತ್ತಿದ್ದ ಮೆರೆಂಗ್ಯೂ ಸಂಗೀತ ಕಚೇರಿಯಲ್ಲಿ ರಾಜಕಾರಣಿಗಳು, ಕ್ರೀಡಾಪಟುಗಳು ಮತ್ತು ಇತರರು ಭಾಗವಹಿಸಿದ್ದರು ಎಂದು ತಿಳಿದು ಬಂದಿದೆ.
ಬುದುಕುಳಿದವರಿಗಾಗಿ ತೀವ್ರ ಶೋಧ: ಸ್ಯಾಂಟೊ ಡೊಮಿಂಗೊದಲ್ಲಿನ ಒಂದು ಅಂತಸ್ತಿನ ಜೆಟ್ ಸೆಟ್ ನೈಟ್‌ಕ್ಲಬ್‌ನ ಅವಶೇಷಗಳಡಿಯಲ್ಲಿ ಬದುಕುಳಿದವರಿಗಾಗಿ ರಕ್ಷಣಾ ಸಿಬ್ಬಂದಿ ಹುಡುಕಾಟ ನಡೆಸುತ್ತಿದ್ದಾರೆ ಎಂದು ತುರ್ತು ಕಾರ್ಯಾಚರಣೆಗಳ ನಿರ್ದೇಶಕ ಜುವಾನ್ ಮ್ಯಾನುಯೆಲ್ ಮೆಂಡೆಜ್ ಹೇಳಿದ್ದಾರೆ. ನಾವು ಅವಶೇಷಗಳನ್ನು ತೆರವುಗೊಳಿಸುವುದರ ಜತೆಗೆ ಅದರಲ್ಲಿ ಸಿಲುಕಿಕೊಂಡವರಿಗಾಗಿ ಹುಡುಕಾಟ ನಡೆಸುತ್ತಿದ್ದೇವೆ ಎಂದು ಮಂಗಳವಾರ ರಾತ್ರಿ ಮಾಧ್ಯಮಗಳೊಂದಿಗೆ ಮಾತನಾಡಿ ತಿಳಿಸಿದ್ದಾರೆ.
ಜೀವ ಕಳೆದುಕೊಂಡ ಹಲವು ಪ್ರತಿಷ್ಠಿತರು: ನೈಟ್‌ಕ್ಲಬ್‌ನ ಛಾವಣಿ ಕುಸಿದು ಸುಮಾರು 12 ಗಂಟೆಗಳ ನಂತರ ರಕ್ಷಣಾ ಸಿಬ್ಬಂದಿಗಳು ಅವಶೇಷಗಳಡಿಯಿಂದ ಬದುಕುಳಿದವರನ್ನು ಹೊರತೆಗೆಯುತ್ತಿದ್ದಾರೆ. ಅಗ್ನಿಶಾಮಕ ದಳದವರು ಮುರಿದ ಕಾಂಕ್ರೀಟ್‌ನ ಬ್ಲಾಕ್‌ಗಳನ್ನು ತೆಗೆದು ಹಾಕುತ್ತಿದ್ದಾರೆ. ರಕ್ಷಣಾ ಸಿಬ್ಬಂದಿ ಕ್ಲಬ್‌ನಲ್ಲಿನ ಮೂರು ಪ್ರದೇಶಗಳಿಗೆ ಆದ್ಯತೆ ನೀಡುತ್ತಿದ್ದಾರೆ ಎಂದು ಮೆಂಡೆಜ್ ಮಾಹಿತಿ ನೀಡಿದ್ದಾರೆ. ಅವಶೇಷಗಳ ಅಡಿ ಸಿಲುಕಿದವರ ಆರ್ತನಾದ ಹೊರ ಬರುತ್ತಿದ್ದು, ಕಾಪಾಡಿ ಕಾಪಾಡಿ ಎಂಬ ಶಬ್ಧ ಕೇಳಿ ಬರುತ್ತಿದೆ ಎಂದು ರಕ್ಷಣಾ ಕಾರ್ಯಾಚರಣೆ ಸಿಬ್ಬಂದಿ ಹೇಳುತ್ತಿದ್ದಾರೆ ಎಂದು ವರದಿಯಾಗಿದೆ.
ಕನಿಷ್ಠ 160 ಮಂದಿಗೆ ಗಾಯ, ಮುಂದುವರಿದ ರಕ್ಷಣಾ ಕಾರ್ಯಾಚರಣೆ: ಮಾಂಟೆಕ್ರಿಸ್ಟಿಯ ವಾಯುವ್ಯ ಪ್ರಾಂತ್ಯದ ಗವರ್ನರ್ ನೆಲ್ಸಿ ಕ್ರೂಜ್ ಮತ್ತು ಏಳು ಬಾರಿ ಮೇಜರ್ ಲೀಗ್ ಬೇಸ್‌ಬಾಲ್ ಆಲ್-ಸ್ಟಾರ್ ನೆಲ್ಸನ್ ಕ್ರೂಜ್ ಅವರ ಸಹೋದರಿ ಸಹ ಈ ಘಟನೆಯಲ್ಲಿ ಪ್ರಾಣಕಳೆದುಕೊಂಡಿದ್ದಾರೆ. ಕನಿಷ್ಠ 160 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅವರಲ್ಲಿ ಅಲ್ಲಿನ ಶಾಸಕ ಬ್ರೇ ವರ್ಗಾಸ್ ಸಹ ಸೇರಿದ್ದಾರೆ ಎಂದು ತಿಳಿದು ಬಂದಿದೆ.
ಮೇಲ್ಛಾವಣಿ ಕುಸಿದಾಗ ಪ್ರದರ್ಶನ ನೀಡುತ್ತಿದ್ದ ಮೆರೆಂಗ್ಯೂ ಗಾಯಕ ರುಬ್ಬಿ ಪೆರೆಜ್ ಸಂಬಂಧಿಕರು ಅಲ್ಲಿದ್ದರು, ಅವರನ್ನು ರಕ್ಷಣಾ ಸಿಬ್ಬಂದಿ ರಕ್ಷಿಸುವಲ್ಲಿ ಯಶಸ್ವಿಯಾಗಿದೆ ಎಂಬ ಸುದ್ದಿ ಬಂದಿತ್ತು. ಆದರೆ ಇದು ನಿಜವಲ್ಲ ಅವರನ್ನು ಇನ್ನೂ ಹುಡುಕಾಟ ನಡೆಸಿದ್ದಾರೆ ಎಂದು ವರದಿಯಾಗಿದೆ.