Shivakumara Swamiji: ತುಮಕೂರು ರೈಲು ನಿಲ್ದಾಣಕ್ಕೆ ಶ್ರೀ ಶಿವಕುಮಾರ ಸ್ವಾಮೀಜಿ ಹೆಸರು: - ಜಿ.ಪರಮೇಶ್ವರ

ಜಿಲ್ಲಾ ಸುದ್ದಿ

ರಾಘವೇಂದ್ರ ಹೆಚ್​​.ಎ

4/10/20251 min read

ತುಮಕೂರು: ತುಮಕೂರು ರೈಲ್ವೆ ನಿಲ್ದಾಣಕ್ಕೆ ಶಿವಕುಮಾರ ಶ್ರೀಗಳ ಹೆಸರಿಡಲು ಪ್ರಸ್ತಾವನೆ ಬಂದಿದೆ. ಈ ಕುರಿತು ಸಿಎಂ ಜೊತೆ ಚರ್ಚಿಸಿ ಆದೇಶ ಹೊರಡಿಸುವುದಾಗಿ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದರು.

ಇಂದು ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ಗೃಹಸಚಿವರು ಬಳಿ ಮಾತನಾಡಿದ ಅವರು,  ಶ್ರೀ ಶಿವಕುಮಾರ ಸ್ವಾಮೀಜಿಗಳ ಅಪಾರ ಭಕ್ತಗಣಕ್ಕೆ ಸಿಹಿ ಸುದ್ದಿ ನೀಡಿದ್ದಾರೆ. ತುಮಕೂರು ರೈಲ್ವೆ ನಿಲ್ದಾಣಕ್ಕೆ ಶ್ರೀಗಳ ಹೆಸರಿಟ್ಟರೇ ಶಾಶ್ವತವಾಗಿರುತ್ತೆ ಶ್ರೀಗಳ ಹೆಸರಿಡುವಂತೆ ಕೇಂದ್ರ ಸಚಿವ ಸೋಮಣ್ಣ ಕೂಡ ಮನವಿ ಮಾಡಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಶ್ರೀಗಳ ಹೆಸರಿಡಲು ಕೇಂದ್ರದಿಂದ ಮಂಜೂರು ಆಗಬೇಕು. ಶ್ರೀಗಳ ಹೆಸರಿಡುವ ವಿಚಾರದಲ್ಲಿ ವಿಳಂಬವಾಗಿಲ್ಲ. ಸಾರ್ವಜನಿಕ ಸ್ಥಳಗಳಿಗೆ ಹೆಸರಿಡಬೇಕಾದರೆ ಪ್ರೊಸಿಜರ್ ಇರುತ್ತೆ ಪ್ರಸ್ತಾವನೆಗಳು ಬಂದಾಗ ಸಾಧಕ ಬಾಧಕ ನೋಡಬೇಕಾಗುತ್ತೆ ಎಲ್ಲವನ್ನೂ ಪರಿಶೀಲಿಸಿದ ಬಳಿಕ ಪ್ರೊಸಿಜರ್ ಆಗಬೇಕಿದೆ ಎಂದರು.

ನಮ್ಮ ಕುಟುಂಬಕ್ಕೂ ತುಮಕೂರಿನ ಮಠಕ್ಕೂ ಅವಿನಾಭವ ಸಂಬಂಧವಿದೆ. ಇತ್ತೀಚೆಗೆ ನಡೆದ ಶ್ರೀಶಿವಕುಮಾರ ಸ್ವಾಮೀಜಿಗಳ ಜನ್ಮದಿನಾಚರಣೆಗೆ ಬರಲು ಆಗಿರಲಿಲ್ಲ. ಅದಕ್ಕಾಗಿ ಇಂದು ಸ್ವಾಮೀಜಿಗೆ ಗೌರವ ಸಮರ್ಪಣೆ ಮಾಡಲು ಬಂದಿದ್ದೇನೆ. ಸಿದ್ದಲಿಂಗಸ್ವಾಮೀಜಿಗೆ ನಮನ ಸಲ್ಲಿಸಿದ್ದೇನೆ. ನಮ್ಮ ತಂದೆ ಹಾಗೂ ಹಿರಿಯ ಸ್ವಾಮೀಜಿ ಜೊತೆಗೆ ಇದ್ದಂತಹ ಸಂಬಂಧ ಯಾವಾಗಲೂ ಇರುತ್ತದೆ ಎಂದಿದ್ದಾರೆ.

ಇತ್ತೀಚಿನ ಸುದ್ದಿ