ಹುಬ್ಬಳ್ಳಿಯಲ್ಲಿ ಬೆಚ್ಚಿ ಬೀಳಿಸಿದ ಮರ್ಯಾದೆಗೇಡು ಹತ್ಯೆ: ತಂದೆಯಿಂದಲೇ ಗರ್ಭಿಣಿ ಪುತ್ರಿಯ ಭೀಕರ ಕೊಲೆ

ಸ್ಥಳೀಯ ಸುದ್ದಿ

ಧರ್ಮ ಬಸವನಪುರ.

12/22/20251 min read

ಹುಬ್ಬಳ್ಳಿ; ಅನ್ಯ ಜಾತಿಗೆ ಸೇರಿದ ಯುವಕನನ್ನು ಪ್ರೀತಿಸಿ ಮದುವೆಯಾಗಿ ಗರ್ಭಿಣಿಯಾಗಿದ್ದ 19 ವರ್ಷದ ಪುತ್ರಿಯನ್ನು ತಂದೆ ಹಾಗೂ ಕುಟುಂಬದವರು ಕೊಡಲಿಯಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿದ ಘಟನೆ ಹುಬ್ಬಳ್ಳಿ ತಾಲೂಕಿನ ಇನಾಂವೀರಾಪುರದಲ್ಲಿ ಭಾನುವಾರ ನಡೆದಿದೆ.

ಮಾನ್ಯಾ ಪಾಟೀಲ್(19) ಕೊಲೆಯಾದ ಯುವತಿ. ಯುವತಿ ಲಿಂಗಾಯತ ಸಮಾಜದವಳಾಗಿದ್ದು, ವಿವೇಕಾನಂದ ದಲಿತ ಸಮುದಾಯಕ್ಕೆ ಸೇರಿದ್ದ. ಮಗಳು ದಲಿತನ ಕೈ ಹಿಡಿದ ಕೋಪಕ್ಕೆ ಮಾನ್ಯ ತಂದೆ ಸಂಬಂಧಿಕರ ಜೊತೆ ಸೇರಿ ಗರ್ಭಿಣಿ ಮಗಳ ಉಸಿರನ್ನೇ ನಿಲ್ಲಿಸಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.

ಮಾನ್ಯಾ (19) ಎಂಬ ಯುವತಿ ಅದೇ ಗ್ರಾಮದ ವಿವೇಕಾನಂದನನ್ನು ಪ್ರೀತಿಸಿ ರಿಜಿಸ್ಟರ್ ಮದುವೆಯಾಗಿದ್ದು, ಈ ಸಂಬಂಧಕ್ಕೆ ವಿರೋಧಿಸಿದ್ದ ತಂದೆ ಪ್ರಕಾಶಗೌಡ ಪಾಟೀಲ್ ಮನೆಗೆ ನುಗ್ಗಿ ಪೈಪ್ ಹಾಗೂ ಗುದ್ದಲಿಯಿಂದ ಹಲ್ಲೆ ನಡೆಸಿದ್ದಾನೆ.

ಈ ದಾಳಿಯಲ್ಲಿ ಮಾನ್ಯಾ ಗಂಭೀರವಾಗಿ ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದು, ಘಟನೆಯಲ್ಲಿ ಇನ್ನಿಬ್ಬರು ಗಾಯಗೊಂಡಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಮುಖ ಆರೋಪಿಗಳಾದ ಮಾನ್ಯ ತಂದೆ ಪ್ರಕಾಶ್ ಗೌಡ ಪಾಟೀಲ್, ವೀರನಗೌಡ ಪಾಟೀಲ್, ಅರುಣ್ ಗೌಡ ಪಾಟೀಲ್ ರಿಂದ ಕೊಲೆ ಆರೋಪ ಕೇಳಿ ಬಂದಿದೆ. ಮೂವರನ್ನು ಪೊಲೀಸರು ಬಂಧಿಸಿದ್ದಾರೆ.