ದೊಡ್ಡಬಳ್ಳಾಪುರ ಬಿಇಒ ಕಚೇರಿಯಲ್ಲಿ ಸಿಬ್ಬಂದಿಗಳ ಕೊರತೆ, ಸಮಯಕ್ಕೆ ಕೆಲಸಗಳಾಗದೆ ಶಿಕ್ಷಕರ ಪರದಾಟ

ಸ್ಥಳೀಯ ಸುದ್ದಿ

RAGHAVENDRA H A

7/21/20251 min read

ದೊಡ್ಡಬಳ್ಳಾಪುರ: ತಾಲ್ಲೂಕಿನ ಹಲವು ಸರ್ಕಾರಿ ಶಾಲೆಗಳು ಸೇರಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಸಿಬ್ಬಂದಿಗಳ ಕೊರೆಯಿಂದಾಗಿ ಸಮಯಕ್ಕೆ ಸರಿಯಾಗಿ ಆಡಳಿತಾತ್ಮಕ ಕೆಲಸಗಳಾಗದೆ ತಾಲ್ಲೂಕಿನ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಶಿಕ್ಷಕರು ಮತ್ತು ಶಿಕ್ಷಕೇತರರು ಪರದಾಡುವಂತಾಗಿದೆ.

ನಗರದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಹಲವು ತಿಂಗಳುಗಳಿಂದ ಮ್ಯಾನೇಜರ್​ (ವ್ಯವಸ್ಥಾಪಕರು), ತಾಲ್ಲೂಕು ದೈಹಿಕ ಶಿಕ್ಷಣಾಧಿಕಾರಿ, ಕ್ಲರ್ಕ್​ ಕಂ ಟೈಪಿಸ್ಟ್​ (ಸಿಸಿಟಿ) ಸೇರಿದಂತೆ ಹಲವು ವಿಭಾಗದಲ್ಲಿ ಸಿಬ್ಬಂದಿಗಳ ಕೊರತೆಯಿಂದಾಗಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಶಿಕ್ಷಕರ ಸಂಬಳ, ಇತರೇ ಭತ್ಯೆಗಳಯ ಬಿಡುಗಡೆಯಾಗುತ್ತಿಲ್ಲ, ಪ್ರತಿನಿತ್ಯ ಬಿಇಒ ಕಚೇರಿಗೆ ಅಲೆಯುವಂತಾಗಿದೆ ಎಂದು ಹೆಸರು ಹೇಳಲಿಚ್ಚಿಸದ ಶಿಕ್ಷಕರೊಬ್ಬರು ಆರೋಪಿಸಿದ್ದಾರೆ.

ದೊಡ್ಡಬಳ್ಳಾಪುರ ನಗರದಲ್ಲಿರುವ ಸರ್ಕಾರಿ ತೆಲುಗು ಪ್ರೌಢಶಾಲೆಯೂ ಸುತ್ತಲಿನ ಆರು ಜಿಲ್ಲೆಗಳಿಗೂ ಸೇರಿ ಏಕೈಕ ಮೈನಾರಿಟಿ ಶಾಲೆಯಾಗಿದೆ. ಈ ಶಾಲೆಯಲ್ಲಿದ್ದ ದ್ವಿತೀಯ ದರ್ಜೆ ಸಹಾಯಕರನ್ನು ಸಹಾಯಕ ನಿರ್ದೇಶಕರು ಆದೇಶದಂತೆ ತಾತ್ಕಾಲಿಕವಾಗಿ ಬೇರೆಡೆಗೆ ನಿಯೋಜನೆ ಮಾಡಲಾಗಿದೆ. ಇದರಿಂದ ಶಾಲಾ ಆಡಳಿತಾತ್ಮಕ ಹಾಗೂ ಬೇರೆ ಕೆಲಸಗಳಿಗೆ ತೊಂದರೆಯಾಗುತ್ತಿದೆ. ಈ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಕಂಪ್ಯೂಟರ್​ ಮೂಲಕ ಅಪ್ಡೇಟ್​ ಮಾಡಲು ಬೇರೆಯವರನ್ನು ಅವಲಂಭಿಸುವಂತಾಗಿದೆ.

ಇನ್ನು ದೊಡ್ಡಬಳ್ಳಾಪುರ ನಗರದ ಸರ್ಕಾರಿ ಜೂನಿಯರ್ ಕಾಲೇಜು ಆವರಣದಲ್ಲಿರುವ ಸರ್ಕಾರಿ ಪ್ರೌಢಶಾಲೆಯಲ್ಲಿಯೂ ಸಹ ಸಿಬ್ಬಂದಿಗಳ ಕೊರೆತೆ ಇದೆ. ಇಲ್ಲಿಗೆ ತಾಲ್ಲೂಕಿನ ಹಲವೆಡೆಗಳಿಂದ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿದ್ದು ಸಿಬ್ಬಂದಿಗಳು ಹಾಗೂ ಶಿಕ್ಷಕರ ಕೊರತೆಯಿಂದ ಶಾಲಾ ಶಿಕ್ಷಣ ಗುಣಮಟ್ಟ ಕುಸಿದಿದೆ ಎಂದು ಪೋಷಕರು ಆರೋಪ ಮಾಡಿದ್ದಾರೆ.

ಸಕ್ಕರೆ ಗೊಲ್ಲಹಳ್ಳಿಯಲ್ಲಿರುವ ಸರ್ಕಾರಿ ಶಾಲೆಯಲ್ಲಿಯೂ ಇದೇ ಪರಿಸ್ಥಿತಿ ನಿರ್ಮಾಣವಾಗಿದೆ. ಆದ್ದರಿಂದ ಈ ಕೂಡಲೇ ವಿವಿಧ ಶಾಲೆಗಳಲ್ಲಿನ ಸಿಬ್ಬಂದಿಗಳನ್ನು ಬೇರೆ ಬೇರೆ ಕಡೆಗೆ ತಾತ್ಕಾಲಿಕವಾಗಿ ನಿಯೋಜನೆ ಮಾಡಿರುವವರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಿ ಮೂಲ ಶಾಲೆಗಳೆಗಳಿಗೆ ಹಿಂತಿರುಗುವಂತೆ ಆದೇಶಿಸಬೇಕು ಮತ್ತು ಸಿಬ್ಬಂದಿಗಳ ಕೊರತೆ ಇರುವ ಶಾಲೆಗಳಿಗೆ ಮತ್ತು ಕ್ಷೇತ್ರಶಿಕ್ಷಣಾಧಿಕಾರಿಗಳ ಕಚೇರಿಗೆ ಸಿಬ್ಬಂದಿಗಳನ್ನು ನಿಯೋಜನೆ ಮಾಡುವ ಮೂಲಕ ಶಾಲಾ ಶಿಕ್ಷಕರ ಒತ್ತಡವನ್ನು ಕಡಿಮೆ ಮಾಡಬೇಕು ಎಂದು ಶಿಕ್ಷಣ ಇಲಾಖೆಗೆ ಶಿಕ್ಷಕರು ಹಾಗೂ ಶಾಲಾ ಪೋಷಕರು ಆಗ್ರಹವಾಗಿದೆ.

ಪ್ರಜಾ ಭಾರತ್ ನ್ಯೂಸ್ ವೆಬ್ ಪೋರ್ಟಲ್ ವಾಟ್ಸಪ್ ಗ್ರೂಪ್ ಸೇರಲು 👇👇Follow this link to join my WhatsApp group: https://chat.whatsapp.com/Fj6L4Eak7N994zl2QHSpHK