ನಾಳೆ SSLC ಪರೀಕ್ಷೆ ಫಲಿತಾಂಶ ಪ್ರಕಟ, ಸಂಪೂರ್ಣ ಮಾಹಿತಿ ಇಲ್ಲಿದೆ
ರಾಜ್ಯ


ಬೆಂಗಳೂರು: 2025ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶವು ಮೇ.2 ರಂದು ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯು ಪ್ರಕಟಣೆಯಲ್ಲಿ ತಿಳಿಸಿದೆ.
ಎಸ್ಎಸ್ಎಲ್ಸಿ ಪರೀಕ್ಷೆ-1ರ ಪರೀಕ್ಷೆಗಳು ಮಾರ್ಚ್ 21 ರಿಂದ ಏಪ್ರಿಲ್ 4 ರ ವರೆಗೆ ನಡೆದಿದ್ದು ಎಲ್ಲಾ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಯಾವಾಗಿರುತ್ತದೆ. ಈ ಪರೀಕ್ಷೆಗಳ ಫಲಿತಾಂಶ ಸಂಬಂಧ ಮೇ.2 ರಂದು ಬೆಳಗ್ಗೆ 11-30ಕ್ಕೆ ಸಚಿವರು ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಲಿದ್ದಾರೆ. ಬಳಿಕ ಅಂದೇ ಮಧ್ಯಾಹ್ನ 12-30 ಗಂಟೆಯ ನಂತರ http://karresult.nic.in ಜಾಲತಾಣದಲ್ಲಿ ವೀಕ್ಷಿಸಬಹುದಾಗಿದೆ.

