ಕೆರೆಗಳ ಉಳಿವಿಗಾಗಿ ಅಮರಣಾಂತ ಉಪವಾಸ ಸತ್ಯಾಗ್ರಹಕ್ಕೆ ನಮ್ಮ ಸಂಪೂರ್ಣ ಬೆಂಬಲ: ಶಿವಶಂಕರ್
ಸ್ಥಳೀಯ ಸುದ್ದಿ


ದೊಡ್ಡಬಳ್ಳಾಪುರ: ಕಳೆದ ಎಂಟು ವರ್ಷಗಳಿಂದ ಅರ್ಕಾವತಿ ನದಿ ಪಾತ್ರದ ಕೆರೆಗಳು ಹಾಳಾಗುತ್ತಿರುವ ಕುರಿತು ಇಲ್ಲಿನ ರೈತರು ಪ್ರತಿಭಟನೆ ಮಾಡುತ್ತಿದ್ದರು ಯಾವುದೇ ಅಧಿಕಾರಿಗಳು, ಜನಪ್ರತಿನಿಧಿಗಳು ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ ಇವರ ಈ ಸತ್ಯಾಗ್ರಹ ಹೋರಾಟಕ್ಕೆ ನಮ್ಮ ಸಂಪೂರ್ಣ ಬೆಂಬಲ ಇದೆ ಎಂದು ಕರ್ನಾಟಕ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆಯ ರಾಜ್ಯ ಕಾರ್ಯಧ್ಯಕ್ಷ ಶಿವಶಂಕರ್ ಪ್ರತಿಕ್ರಿಯೆ ನೀಡಿದರು.
ನಗರದ ತಾಲ್ಲೂಕು ಕಚೇರಿ ಆವರಣದಲ್ಲಿ ಕೆರೆಗಳ ಸಂರಕ್ಷಣೆಗಾಗಿ ವೇದಿಕೆ ಹೋರಾಟಗಾರರು ನಡೆಸುತ್ತಿರುವ ಅಮರಣಾಂತ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಭೇಟಿ ನೀಡಿ ಅವರು ಮಾತನಾಡಿದರು.
ಇಲ್ಲಿನ ಚಿಕ್ಕತುಮಕೂರು, ದೊಡ್ಡತುಮಕೂರು, ಮಜರಾಹೊಸಹಳ್ಳಿ ಗ್ರಾಮಸ್ಥರು ಗ್ರಾಮದ ಕೆರೆ ಉಳುವಿಗಾಗಿ ಹೋರಾಟ ನಡೆಸುತ್ತಿದ್ದಾರೆ. ಬಾಶೆಟ್ಟಿಹಳ್ಳಿ ಕಾರ್ಖಾನೆಗಳು ಮತ್ತು ದೊಡ್ಡಬಳ್ಳಾಪುರ ನಗರಸಭೆ ಒಳಚರಂಡಿ ನೀರನ್ನು ಸಂಸ್ಕರಣೆ ಮಾಡದೆ ನೇರವಾಗಿ ಕೆರೆಗಳಿಗೆ ಬಿಟ್ಟು ಹಾಳು ಮಾಡಿದ್ದಾರೆ. ನಗರದಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿ ಕಚೇರಿ ನಾಮಕೇವಾಸ್ತೆ ತೆರೆದಿದ್ದು ಒಂದು ದಿನಕ್ಕೂ ಕಾರ್ಯಾಚರಣೆ ಮಾಡಿಲ್ಲ, ನಾಚಿಕೆಯಾಗುವಯದಿಲ್ಲವ ನಿಮಗೆ ಎಂದು ಕಿಡಿಕಾರಿದರು.
ದಯವಿಟ್ಟು ಈಗಲಾದರೂ ಅರ್ಕಾವತಿ ನದಿ ಪಾತ್ರದ ಕೆರೆಗಳ ಜನರು ಎಚ್ಚೆತ್ತು ಹೋರಾಟಕ್ಕೆ ಬೆಂಬಲ ನೀಡಿ ಎಂದು ಮನವಿ ಮಾಡಿಕೊಂಡರು.
ಈ ವೇಳೆ ಬಿ.ಎಲ್ ರಾಮ್, ಕುಮುದ, ಕುಮಾರ್, ಚಂದ್ರಿಕಾ, ಹನುಮೇಶ್, ನಾಗರಾಜ್, ಗಣೇಶ್, ಹನುಮಂತರಾಯಪ್ಪ ಸೇರಿದಂತೆ ಇತರರು ಇದ್ದರು.