ಪ್ರಬಲ ದೇಶವನ್ನ ಕಟ್ಟಲು ಯುವಜನತೆಯ ಪಾತ್ರ ಮಹತ್ವದ್ದಾಗಿದೆ: ಅರವಿಂದ ಲಿಂಬಾವಳಿ.

ಸ್ಥಳೀಯ ಸುದ್ದಿ

ಧರ್ಮ ಬಸವನಪುರ.

9/16/20251 min read

ಮಹದೇವಪುರ: ಪ್ರಬಲ ದೇಶವನ್ನು ಕಟ್ಟಲು ಯುವಜನತೆಯ ಪಾತ್ರ ಮಹತ್ವದ್ದಾಗಿದೆ. ಕೇಂದ್ರ ಸರ್ಕಾರ ಯುವಕರ ಪ್ರಗತಿಗೆ ಹಲವಾರು ಯೋಜನೆಗಳನ್ನು ರೂಪಿಸಿದ್ದು, ಅವುಗಳ ಸದುಪಯೋಗಪಡಿಸಿಕೊಳ್ಳಬೇಕು ಎಂದು ಮಾಜಿ ಸಚಿವ ಅರವಿಂದ ಲಿಂಬಾವಳಿಯವರು ತಿಳಿಸಿದರು.

ಮಹದೇವಪುರ ಕ್ಷೇತ್ರದ ಕಾಟಂನಲ್ಲೂರಿನ ಖಾಸಗಿ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ಬಿಜೆಪಿ ಯುವಮೋರ್ಚಾ ಗ್ರಾಮಾಂತರ ಮಂಡಲ ಸಮಾವೇಶಕ್ಕೆ ಚಾಲನೆ ನೀಡಿ ಮಾತನಾಡಿದರು ಅವರು, ಇಂದಿನ ಭಾರತವು ಯುವಶಕ್ತಿಯಿಂದ ಮುನ್ನಡೆಯುತ್ತಿದೆ. ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ಮುದ್ರಾ, ಸ್ಟಾರ್ಟ್ ಅಪ್ ಇಂಡಿಯಾ, ಸ್ಕಿಲ್ ಇಂಡಿಯಾ, ಡಿಜಿಟಲ್ ಇಂಡಿಯಾ ಮತ್ತಿತರ ಯೋಜನೆಗಳ ಮೂಲಕ ಲಕ್ಷಾಂತರ ಯುವಕರು ಉದ್ಯಮಗಳನ್ನು ಸ್ಥಾಪಿಸಿ ಸಮರ್ಥವಾಗಿ ಮುನ್ನಡೆಸುತ್ತಿದ್ದಾರೆ ಎಂದು ಹೇಳಿದರು.

ನೂತನ ಶಿಕ್ಷಣ ನೀತಿಯ ಮೂಲಕ ಯುವಜನರಿಗೆ ಜಾಗತಿಕ ಅವಕಾಶಗಳನ್ನು ನೀಡಲಾಗುತ್ತಿದೆ. ಯುವ ಮೋರ್ಚಾದ ಎಲ್ಲಾ

ಮುಖಂಡರು ಹಾಗೂ ಕಾರ್ಯಕರ್ತರು ತಮ್ಮ ಶಕ್ತಿಯನ್ನು ದೇಶ ನಿರ್ಮಾಣದಲ್ಲಿ ಬಳಸುವ ಸಂಕಲ್ಪ ಮಾಡಬೇಕಾಗಿದೆ ಎಂದರು.

ಇಂದು ವಿಶ್ವವು ಭಾರತದ ಯುವಕರ ಪ್ರತಿಭೆಯನ್ನು ಗುರುತಿಸುತ್ತಿದೆ. ಯುವಮೋರ್ಚದ ಎಲ್ಲಾ ಮುಖಂಡರು ಹಾಗೂ ಕಾರ್ಯಕರ್ತರು ಈ ಶಕ್ತಿಯನ್ನು ದೇಶ ನಿರ್ಮಾಣದ ದಾರಿಗೆ ಕೊಂಡೊಯ್ಯುವ ಸಂಕಲ್ಪ ಮಾಡಬೇಕಾಗಿದೆ ಎಂದರು.

ಮಹದೇವಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಯುವಕರ ಕೌಶಲ್ಯ ಪ್ರತಿಭೆಯನ್ನು ಗುರುತಿಸುವ ಸಲುವಾಗಿ ಹಲವು ಕಾರ್ಯಕ್ರಮಗಳನ್ನು ರೂಪಿಸಿದ್ದೇವೆ ಎಂದರು.

ಉದ್ಯೋಗಾಕಾಂಕ್ಷಿಗಳಿಗಾಗಿ ಬೃಹತ್ ಉದ್ಯೋಗ ಮೇಳ, ಭಾರತ ಮಾತಾ ಪೂಜೆ ಕಾರ್ಯಕ್ರಮದಲ್ಲಿ ಪ್ರತಿಭಾನ್ವಿತ ಸ್ಥಳೀಯ ಕಲಾವಿದರಿಗೆ ವೇದಿಕೆ ಕಲ್ಪಿಸಿಕೊಡುವ ಕೆಲಸ ಮಾಡಿದ್ದೇವೆ. ಈ ಉತ್ತಮ ಕಾರ್ಯಗಳನ್ನು ಭವಿಷ್ಯದಲ್ಲಿಯೂ ಮುಂದುವರಿಸಲಾಗುವುದು ಎಂದು ತಿಳಿಸಿದರು.

ಗ್ರಾಮಾಂತರ ಮಂಡಲ ಯುವ ಮೋರ್ಚಾ ಅಧ್ಯಕ್ಷ ಅನಿಲ್ ಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಕಾರ್ಯಕ್ರಮಕ್ಕೆ ಕ್ಷೇತ್ರದ ನೂರಾರು ಯುವಕರು ಪಾಲ್ಗೊಂಡಿದ್ದರು‌.ಕೊನೆಯಲ್ಲಿ ಗ್ರಾಮಾಂತರ ಮಂಡಲ ಬಿಜೆಪಿ ಯುವಮೋರ್ಚಾ ವತಿಯಿಂದ ಮಾಜಿ ಸಚಿವ ಅರವಿಂದ ಲಿಂಬಾವಳಿಯವರಿಗೆ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಕ್ಷೇತ್ರ ಗ್ರಾಮಾಂತರ ಮಂಡಲದ ಅಧ್ಯಕ್ಷ ಎಚ್.ಎಸ್. ಪಿಳ್ಳಪ್ಪ, ಗ್ರಾಮಾಂತರ ಮಂಡಲ ಯುವ ಮೋರ್ಚಾ ಉಸ್ತುವಾರಿ ಬಿ.ಜಿ. ರಾಜೇಶ್, ಮೇಲುಸ್ತುವಾರಿ ಕೆ.ವಿ. ನಾಗರಾಜ್, ಗ್ರಾಪಂ ಮಾಜಿ ಅಧ್ಯಕ್ಷ ಜ್ಯೋತಿಪುರ ವೇಣು ಸೇರಿ ಯುವ ಮೋರ್ಚಾ ಪದಾಧಿಕಾರಿಗಳು, ಕಾರ್ಯಕರ್ತರಿದ್ದರು.