ಹೊಸಕೋಟೆಯಲ್ಲಿ ಮೂರು ಸರಣಿ ಅಪಘಾತ: 20ಕ್ಕೂ ಹೆಚ್ಚು ಜನರಿಗೆ ಗಾಯ
ಸ್ಥಳೀಯ ಸುದ್ದಿಕ್ರೈಮ್


ಹೊಸಕೋಟೆ : ಬೆಂಗಳೂರು ಹೊರವಲಯದ ಹೊಸಕೋಟೆಯಲ್ಲಿ ಒಂದೇ ಸ್ಥಳದ ಆಸುಪಾಸಿನಲ್ಲಿ ಮೂರು ಸರಣಿ ಅಪಘಾತ ನಡೆದಿದ್ದು 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಮೊದಲಿಗೆ ಹೊಸಕೋಟೆ ಕೋಲಾರ ರಾಷ್ಟ್ರೀಯ ಹೆದ್ದಾರಿ ಎಂವಿಜೆ ಮೇಡಿಕಲ್ ಆಸ್ಪತ್ರೆ ಮುಂಬಾಗ ಹೆದ್ದಾರಿಯಲ್ಲಿ ಕೆಎಸ್ಸಾರ್ಟಿಸಿ ಬಸ್ ಹಾಗೂ ಕ್ಯಾಂಟರ್ ನಡುವೆ ಅಪಘಾತ ಸಂಭವಿಸಿ, 15ಕ್ಕೂ ಹೆಚ್ಚು ಜನರು ಗಾಯಗೊಂಡ ಘಟನೆ ನಡೆದಿದೆ.
ಹೊಸಕೋಟೆ ನಗರದ ಎಂ.ವಿ.ಜೆ.ಆಸ್ಪತ್ರೆ ಬಳಿ ಅಪಘಾತ ನಡೆದಿದೆ.ಅಪಘಾತದ ಭೀಕರತೆಗೆ ಕೆಎಸ್‌ಆರ್ ಟಿ ಸಿ ಬಸ್ ಹಾಗು ಕ್ಯಾಂಟರ್ ಎರಡೂ ಕೂಡ ನುಜ್ಜುಗುಜ್ಜಾಗಿದೆ.
ಬಸ್ ನಲ್ಲಿದ್ದ 15 ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿದ್ದು, ಅತಿ ವೇಗ ಹಾಗೂ ನಿರ್ಲಕ್ಷದ ಚಾಲನೆಯೇ ಅಪಘಾತಕ್ಕೆ ಪ್ರಮುಖ ಕಾರಣವಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.ಗಾಯಾಳುಗಳನ್ನು ಹೊಸಕೋಟೆ ಖಾಸಗಿ ಆಸ್ಪತ್ರೆಗೆ ರವಾನೆ. ಮಾಡಲಾಗಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನಂತರ ಕಾರುವೊಂದು ಲಾರಿಯನ್ನ ಒವರ್ ಟೇಕ್ ಮಾಡಲು ಹೋಗಿ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದು ರಸ್ತೆ ಬದಿಯಲ್ಲಿ ಬಿದ್ದಿದೆ.ಮದುವೆ ಹೊಗುತ್ತಿದ್ದಾಗ ಅಪಘಾತ ನಡೆದಿದೆ.ಕಾರಿನಲ್ಲಿ ಒಂದು ಮಗು ಸೇರಿದಂತೆ ನಾಲ್ಕು ಜನರಿದ್ದರು.ಕಾರು ಚಲಾಯಿಸುತ್ತಿದ್ದ ಮಹಿಳೆಗೆ ಕೈ ಗೆ ಸಣ್ಣಪುಟ್ಟ ಗಾಯಗಳಾಗಿದ್ದು, ದೊಡ್ಡ ಅನಾವುತಗಳಿಂದ ತಪ್ಪಿಸಿಕೊಂಡಿದ್ದಾರೆ.
ಮತ್ತೊಂದು ಅಪಘಾತ ಎಂವಿಜೆ ಆಸ್ಪತ್ರೆ ಮುಂಭಾಗ ಹೆದ್ದಾರಿಯಲ್ಲಿ ನಿಲ್ಲಿಸಿದ್ದ ಕಂಪನಿಯ ಬಸ್ಸುವೊಂದಕ್ಕೆ ಹಿಂಬದಿಯಿಂದ ದ್ವಿಚಕ್ರ ವಾಹನದಲ್ಲಿ ಬಂದ ಯುವಕರು ಡಿಕ್ಕಿಹೊಡೆದು ಮುಂದೆ ಇದ್ದ ಯುವಕ ಗಂಭೀರವಾಗಿ ಗಾಯಗೊಂಡುದ್ದಾನೆ. ಗಾಯಗೊಂಡ ಯುವಕನನ್ನ ಕೆ.ಆರ್.ಪುರದ ಸಂಜಯ್ ಎಂದು ತಿಳಿದುಬಂದಿದೆ. ಗಾಯಗೊಂಡವರನ್ನು ತಕ್ಷಣವೇ ಹೊಸಕೋಟೆಯ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ದ್ವಿಚಕ್ರ ವಾಹನ ಮುಂಭಾಗ ನಜ್ಜುಗುಜ್ಜಾಗಿದೆ.ಬಸ್ಸ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.
ಹೊಸಕೋಟೆ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಪಘಾತದ ಪರಿಣಾಮ ಕೆಲವು ಕಾಲ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಪೊಲೀಸರು ವಾಹನ ತೆರವು ಕಾರ್ಯಾಚರಣೆಗೆ ಮುಂದಾಗಿ ಸಂಚಾರ ಸರಾಗವಾಗುವಂತೆ ಕ್ರಮ ಕೈಗೊಂಡಿದ್ದಾರೆ.