ಆಂಧ್ರದಲ್ಲಿ ಬೆಂಗಳೂರಿನ ಇಬ್ಬರು ಬಿಜೆಪಿ ಮುಖಂಡರ ಕತ್ತು ಸೀಳಿ ಬರ್ಬರ ಹತ್ಯೆ!

ಸ್ಥಳೀಯ ಸುದ್ದಿಕ್ರೈಮ್

ಧರ್ಮ ಬಸವನಪುರ.

7/23/20251 min read

ಬೆಂಗಳೂರು : ಮಹದೇವಪುರ ಕ್ಷೇತ್ರದ ಕಾಡುಗುಡಿ ಮೂಲದ ಇಬ್ಬರು ಉದ್ಯಮಿಗಳು ಹಾಗೂ ಬಿಜೆಪಿ ಮುಖಂಡರನ್ನು ಆಂಧ್ರ ಪ್ರದೇಶ ರಾಜ್ಯದ ಬಾಪಟ್ಲ ಜಿಲ್ಲೆಯಲ್ಲಿ ಬರ್ಬರವಾಗಿ ಕತ್ತು ಸೀಳಿ ಕೊಲೆ ಮಾಡಿ, ಹೆದ್ದಾರಿ ಬಳಿಯಲ್ಲಿ ಬೀಸಾಡಲಾಗಿದೆ.

ಈ ಇಬ್ಬರು ಮೃತರು ತಂದೆ ಮಗ ಆಗಿದ್ದು, ಕೊಲೆ ಘಟನೆ ಆಂಧ್ರ ಪ್ರದೇಶ ರಾಜ್ಯದ ಬಾಪಟ್ಲ ಜಿಲ್ಲೆಯಲ್ಲಿ ಇಂದು ಮಧ್ಯಾಹ್ನ ನಡೆದಿದೆ.ಈ ಭೀಕರ ಹತ್ಯೆಯಿಂದ ರಾಜ್ಯದ‌‌ ಜನರನ್ನ ಬೆಚ್ಚಿ ಬೀಳಿಸಿದೆ.

ರಿಯಲ್ ಎಸ್ಟೇಟ್ ವಿಚಾರಕ್ಕೆ ಸಂಬಂದಿಸಿದಂತೆ ಕೋರ್ಟ್ ಕೇಸಿಗೆ ತೆರಳಿದ್ದಾಗ, ಇಬ್ಬರನ್ನೂ ಅಪಹರಿಸಿ ಕೊಲೆ ಬರ್ಬರವಾಗಿ ಕತ್ತು ಸೀಳಿದ್ದಾರೆ. ಮೃತರನ್ನು ಮಹದೇವಪುರ ಬಿಜೆಪಿ ಯುವ ಮುಖಂಡ ಮತ್ತು ಉದ್ಯಮಿ ಪ್ರಶಾಂತರೆಡ್ಡಿ ಹಾಗೂ ಅವರ ತಂದೆ ವೀರಸ್ವಾಮಿರೆಡ್ಡಿ ಎಂದು ಗುರುತಿಸಲಾಗಿದೆ. ಮಾಜಿ ಸಚಿವ ಅರವಿಂದ ಲಿಂಬಾವಳಿ ಆಪ್ತರಾಗಿದ್ದ ತಂದೆ-ಮಗ ಇದೀಗ ಶವವಾಗಿ ಪತ್ತೆಯಾಗಿದ್ದಾರೆ.

ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂದಿಸಿದ ಕೋರ್ಟ್ ಕೇಸ್ ವಿಚಾರಣೆಗೆ ಆಂಧ್ರ ಪ್ರದೇಶ ರಾಜ್ಯಕ್ಕೆ ತೆರಳಿದ್ದರು. ಬೆಂಗಳೂರಿನಲ್ಲಿ ಪ್ರಶಾಂತ್ ಮತ್ತು ವೀರಸ್ವಾಮಿರೆಡ್ಡಿ ಇಬ್ಬರೂ ಮಾರ್ವಲ್ ಬಿಲ್ಡರ್ ಮಾದವರೆಡ್ಡಿ ಮತ್ತು ಅನಿಲ್ ರೆಡ್ಡಿ ಮೇಲೆ ಚೆಕ್ ಬೌನ್ಸ್ ಕೇಸು ದಾಖಲಿಸಿದ್ದರು. ಇದಕ್ಕೆ ಪ್ರತಿಯಾಗಿ ಆಂಧ್ರ ಮೂಲದ ಮಾದವರೆಡ್ಡಿ ಮತ್ತು ಅನಿಲ್ ರೆಡ್ಡಿ ಅಪ್ಪ- ಮಗನ ಮೇಲೆ ಚೆಕ್ ಬೌನ್ಸ್ ಕೇಸು ದಾಖಲಿಸಿದ್ದರು. ನಿನ್ನೆ ವಿಮಾನದ ಮೂಲಕ ಅಪ್ಪ-ಮಗ ಕೋರ್ಟ್ ಕೇಸ್ ಗೆ ತೆರಳಿ. ರಾತ್ರಿ ಖಾಸಗಿ ಹೋಟೆಲ್ ನಲ್ಲಿ ತಂಗಿದ್ದರು ಬೆಳಗ್ಗೆ ಹೋಟೆಲ್ ನಲ್ಲಿ ತಿಂಡಿ ಮುಗಿಸಿ ಕೋರ್ಟ್ ಗೆ ಹೊಗಲು ತೆರಳಿದಾಗ ಹೋಟೆಲ್ ಮುಂದೆಯೇ ಆರು ಜನ ಇದ್ದ ಸ್ಕಾರ್ಪಿಯೋ ಕಾರಿನಲ್ಲಿ ಬಂದು ಅಪ್ಪ ಮಗನನ್ನ ಬಲವಂತವಾಗಿ ಕಾರಿನಲ್ಲಿ ಹತ್ತಿಸಿಕೊಂಡು ಕಿಡ್ನಪ್ ಮಾಡಿ ನಂತರ ಇವರಿಬ್ಬರ ಕತ್ತು ಸೀಳಿ, ಬರ್ಬರವಾಗಿ ಕೊಲೆ ಮಾಡಲಾಗಿದೆ. ಬಳಿಕ ಶವಗಳನ್ನು ಹೆದ್ದಾರಿಯ ಬಳಿ ಬೀಸಾಡಿ ಆರೋಪಿಗಳು ಪರಾರಿಯಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಬಾಪಟ್ಲ ಪೊಲೀಸರು ಘಟನೆಯ ತನಿಖೆ ಆರಂಭಿಸಿದ್ದು, ಆರೋಪಿಗಳಾದ ಮಾದವರೆಡ್ಡಿ ಮತ್ತು ಅನಿಲ್ ರೆಡ್ಡಿಯನ್ನು ಬಂಧಿಸಲು ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ.