ಮೆಳೇಕೋಟೆ ಬಳಿ ಬಸ್ ನಿಂದ ಉರುಳಿಬಿದ್ದು ಮಹಿಳೆ ಸಾವು
ಸ್ಥಳೀಯ ಸುದ್ದಿಕ್ರೈಮ್


ಚಲಿಸುತ್ತಿದ್ದ ಬಸ್ ನಿಂದ ಆಯಾ ತಪ್ಪಿ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ ದೊಡ್ಡರಾಯಪ್ಪನಹಳ್ಳಿ ಬಳಿ ನಡೆದಿದೆ.
ಮೃತ ಮಹಿಳೆಯನ್ನು ದೊಡ್ಡರಾಯಪ್ಪನಹಳ್ಳಿ ನಿವಾಸಿ ಶಶಿಕಲಾ ಎಂದು ಗುರುತಿಸಲಾಗಿದೆ. ಕೆಎಸ್ಆರ್ಟಿಸಿ ಬಸ್ ನಲ್ಲಿ ದೊಡ್ಡಬಳ್ಳಾಪುರದಿಂದ ಮೆಳೇಕೋಟೆಗೆ ಬರುವಾಗ ಈ ದುರ್ಘಟನೆ ಸಂಭವಿಸಿದೆ. ಬಸ್ಸಿನ ಹಿಂದಿನ ಬಾಗಿಲಿನಿಂದ ಆಯಾತಪ್ಪಿ ಬಿದ್ದಿದ್ದಾರೆ. ಬಿದ್ದ ರಭಸಕ್ಕೆ ಸ್ಥಳದಲ್ಲೇ ಮಹಿಳೆ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ಠಾಣಾ ಇನ್ಸ್ಪೆಕ್ಟರ್ ಸಾದಿಕ್ ಪಾಷ ಹಾಗೂ ಸಿಬ್ಬಂದಿ ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರಜಾ ಭಾರತ್ ನ್ಯೂಸ್ ವೆಬ್ ಪೋರ್ಟಲ್ ವಾಟ್ಸಪ್ ಗ್ರೂಪ್ ಸೇರಲು ಈ ಲಿಂಕ್ ಕ್ಲಿಕ್ ಮಾಡಿ 👇👇Follow this link to join my WhatsApp group: https://chat.whatsapp.com/Fj6L4Eak7N994zl2QHSpHK