ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ಗರುಡಚಾರ್ ಪಳ್ಯ ವಾರ್ಡ್ ಕಾರ್ಯಕರ್ತರು.

ಸ್ಥಳೀಯ ಸುದ್ದಿ

ಧರ್ಮ ಬಸವನಪುರ.

9/16/20251 min read

ಮಹದೇವಪುರ- ಕಾಂಗ್ರೆಸ್ ಪಕ್ಷದ ಸಮಾಜಮುಖಿ ಕಾರ್ಯಗಳನ್ನು ಮೆಚ್ಚಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುವ ಅನ್ಯಪಕ್ಷದ ಮುಖಂಡರಿಗೆ ಸೂಕ್ತ ಸ್ಥಾನಮಾನಗಳನ್ನು ನೀಡಲಾಗುವುದು ಎಂದು ಮಾಜಿ ಸಚಿವ ಎಚ್.ನಾಗೇಶ್ ಅವರು ತಿಳಿಸಿದರು.

ಮಹದೇವಪುರ ಕ್ಷೇತ್ರದ ಗರುಡಚಾರಪಾಳ್ಯ ವಾರ್ಡ ಅಧ್ಯಕ್ಷ ಪ್ರಶಾಂತ್ ಕುಮಾರ್ ನೇತೃತ್ವದಲ್ಲಿ ಬಿಜೆಪಿ ಪಕ್ಷದ ಮುಖಂಡರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡು ಮಾತನಾಡಿದರು.

ಕಾಂಗ್ರೆಸ್ ಪಕ್ಷವನ್ನು ಮಹದೇವಪುರ ಕ್ಷೇತ್ರದಲ್ಲಿ ಬಲಿಷ್ಠ ಮಾಡುವ ನಿಟ್ಟಿನಲ್ಲಿ ಎಲ್ಲಾ ಮುಖಂಡರು ಒಗ್ಗಾಟ್ಟಾಗಿ ಶ್ರಮಿಸುವಂತೆ ನುಡಿದರು.

ಮೂರು ಬಾರಿಯೂ ಕಾಂಗ್ರೆಸ್ ಕ್ಷೇತ್ರದಲ್ಲಿ ಪಕ್ಷ ಗೆಲ್ಲಲಿಲ್ಲ ಅದಕ್ಕೆ ಕಾರಣ ಏನೆಂಬುದು ಅರಿತು ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವಂತೆ ಮಾಡೋಣ ಎಂದರು.

ವಾರ್ಡನ ಅಧ್ಯಕ್ಷ ಪ್ರಶಾಂತ್ ಕುಮಾರ್ ಅವರು ಮಾತನಾಡಿ ಕ್ಷೇತ್ರದಲ್ಲಿ ಬದಲಾವಣೆ ತರುವ ನಿಟ್ಟಿನಲ್ಲಿ ಯುವಪಡೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿರುವುದು ಮತ್ತಷ್ಟು ಉತ್ಸಾಹ ನೀಡಿದೆ ಎಂದು ಹೇಳಿದರು.

ಕಳೆದ ನಾಲ್ಕು ಬಾರಿ ಬಿಜೆಪಿ ಪಕ್ಷ ಕ್ಷೇತ್ರದಲ್ಲಿ ಇದ್ದು ಅವರ ಅಭಿವೃದ್ಧಿ ಕಂಡಿಲ್ಲ .ನಮ್ಮ ಗಾರುಡಚಾರ್ ಪಾಳ್ಯ ವಾರ್ಡ್ ನಲ್ಲಿ ಯಾವುದೇ ಅಭಿವೃದ್ಧಿ ಕಾಮಗಾರಿ ಮಾಡಿಲ್ಲ. ಗ್ರಾಮಗಳಲ್ಲಿ ಸಾಕಷ್ಟು ರಸ್ತೆಗಳು ಸರಿಯಿಲ್ಲ. ನಮ್ಮ ವಾರ್ಡ್ ಗೆ ಶಾಶ್ವತ ಯೋಜನೆಗಳು ಕಾರ್ಯರೂಪಕ್ಕೆ ತಂದಿಲ್ಲ.ನಮ್ಮ ವಾರ್ಡ್ ನಲ್ಲಿ ಬಿಜೆಪಿ ಪಕ್ಷದ ಕಾರ್ಯಕರ್ತರು ಕೆಲಸ ಮಾಡಲ್ಲ ಕಾಂಗ್ರೆಸ್ ಪಕ್ಷದವರು ಕೆಲಸ ಮಾಡಲು ಅವರು ಬಿಡಲ್ಲ ಎಂದು ಆರೋಪಿಸಿದರು.

ಈಗ ನಾನು ವಾರ್ಡ್ ಅಧ್ಯಕ್ಷನಾದ ಮೇಲೆ ಎಲ್ಲಾ ಯುವಕರನ್ನ ಒಗ್ಗೂಡಿಸಿ ಪಕ್ಷ ಸಂಘಟನೆ ಮಾಡುತಿದ್ದು ಮುಂದಿನ ದಿನಗಳಲ್ಲಿ ನಮ್ಮ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವಂತೆ ಮಾಡಲು ಸತತ ಪ್ರಯತ್ನ ಮಾಡಲಾಗುವುದು ಎಂದು ತಿಳಿಸಿದರು.

ಪ್ರಶಾಂತ್ ಕುಮಾರ್ ನೇತೃತ್ವದಲ್ಲಿ ಗರುಡಚಾರ್ ಪಾಳ್ಯದ ಸುಮಾರು 80 ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರಿಗೆ ಕಾಂಗ್ರೆಸ್ ಪಕ್ಷದ ಶಾಲು ಹೊದಿಸಿ ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಂಡರು.

ಬೆಂಗಳೂರು ಪೂರ್ವ ಜಿಲಾಧ್ಯಕ್ಷ ನಂದಕುಮಾರ್,ಮಾಜಿ ಪಾಲಿಕೆ ಸದಸ್ಯ ಪಿಳ್ಳಪ್ಪ,ಸಮಾಜ ಸೇವಕ ಯಲ್ಲಪ್ಪ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವಿನೋದ,ಶ್ರೀನಿವಾಸ ರೆಡ್ಡಿ,ಮುಖಂಡರಾದ ರಾಖಿ,ಯುವ ಕಾಂಗ್ರೆಸ್ ಮುಖಂಡ ಅನೀಲ್ ಸೇರಿದಂತೆ ಮತ್ತಿತರರು ಇದ್ದರು.