ಭಾರತ ರಾಷ್ಟ್ರೀಯ ಟ್ರೇಡ್ ಯೂನಿಯನ್ ಕಾಂಗ್ರೆಸ್ ಯೂತ್ ವಿಭಾಗದ ಜಿಲ್ಲಾಧ್ಯಕ್ಷರಾಗಿ ಮೊಹಮ್ಮದ್ ನಿಸಾರ್

ಸ್ಥಳೀಯ ಸುದ್ದಿ

ರಾಘವೇಂದ್ರ ಹೆಚ್. ಎ

2/18/20261 min read

ದೊಡ್ಡಬಳ್ಳಾಪುರ : ಭಾರತ ರಾಷ್ಟ್ರೀಯ ಟ್ರೇಡ್ ಯೂನಿಯನ್ (ಇಂಟಕ್ ) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಯೂತ್ ವಿಭಾಗದ ಜಿಲ್ಲಾಧ್ಯಕ್ಷರಾಗಿ ಮೊಹಮ್ಮದ್ ನಿಸಾರ್ ನೇಮಕವಾಗಿದ್ದಾರೆ, ನೂತನ ಜಿಲ್ಲಾಧ್ಯಕ್ಷರಿಗೆ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಶುಭಕೋರಿದ್ದಾರೆ.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅನುಮೋದನೆಯ ಮೇರೆಗೆ ಮಹಮ್ಮದ್ ನಿಸಾರ್ ನೇಮಕಗೊಂಡಿದ್ದಾರೆ, ನೂತನ ಜಿಲ್ಲಾಧ್ಯಕ್ಷರಿಗೆ ಭಾರತ ರಾಷ್ಟ್ರೀಯ ಟ್ರೇಡ್ ಯೂನಿಯನ್ ಕರ್ನಾಟಕದ ಅಧ್ಯಕ್ಷರಾದ ಡಿ.ಲಕ್ಷ್ಮೀ ವೆಂಕಟೇಶ್ ಆದೇಶ ಪತ್ರವನ್ನ ನೀಡುವ ಮೂಲಕ ಪಕ್ಷ ಸಂಘಟನೆ ಮಾಡುವಂತೆ ಸೂಚನೆ ನೀಡಿದ್ದಾರೆ.

ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಇಂಟಕ್ ಯೂತ್ ವಿಭಾಗದ ನೂತನ ಅಧ್ಯಕ್ಷರಾದ ಮೊಹಮ್ಮದ್ ನಿಸಾರ್, ಒಬ್ಬ ಸಾಮಾನ್ಯ ಕಾಂಗ್ರೆಸ್ ಕಾರ್ಯಕರ್ತನಾಗ ನನ್ನನ್ನು ಗುರುತಿಸಿ ಪಕ್ಷ ಸಂಘಟನೆ ಜವಾಬ್ದರಿಯನ್ನು ನೀಡಿದೆ, ಪಕ್ಷದ ಮುಖಂಡರು ನನ್ನ ಪಕ್ಷ ನಿಷ್ಠೆಯನ್ನ ನಂಬಿ ಜಿಲ್ಲಾಧ್ಯಕ್ಷ ಸ್ಥಾನ ನೀಡಿದ್ದಾರೆ, ಅವರ ನಂಬಿಕೆಯನ್ನು ಉಳಿಸಿಕೊಂಡು ಜಿಲ್ಲೆಯಲ್ಲಿ ಪಕ್ಷ ಸಂಘಟನೆಯ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಶಕ್ತಿ ತುಂಬುವ ಕೆಲಸ ಮಾಡುವುದ್ದಾಗಿ ಹೇಳಿದರು.

ನೂತನ ಜಿಲ್ಲಾಧ್ಯಕ್ಷರಿಗೆ ಮಾಜಿ ಶಾಸಕರಾದ ಟಿ.ವೆಂಕಟರಮಣಯ್ಯ, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕೆ.ಪಿ.ಜಗನ್ನಾಥ್, ಕಸಬಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಅಪ್ಪಿ ವೆಂಕಟೇಶ್, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೈರೇಗೌಡ, ಡಿಪಿಎ ಅಧ್ಯಕ್ಷರಾದ ಚುಂಚೇಗೌಡ, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ವಿಶ್ವನಾಥ್ ರೆಡ್ಡಿ, ಡಿಪಿಎ ಸದಸ್ಯರಾದ ಅಂಜನಮೂರ್ತಿ ಶುಭ ಕೋರಿದರು.

ಪ್ರಜಾಭಾರತ್ ನ್ಯೂಸ್ ವಾಟ್ಸಪ್ ಗ್ರೂಪ್ ಸೇರಲು ಈ👇 ಲಿಂಕ್ ಕ್ಲಿಕ್ ಮಾಡಿ

Follow this link to join my WhatsApp group: https://chat.whatsapp.com/Fj6L4Eak7N994zl2QHSpHK?mode=gi_t

ರಾಘವೇಂದ್ರ ಹೆಚ್. ಎ