ಕೆ.ಆರ್.ಪುರ: ಯುವ ಕಾಂಗ್ರೆಸ್ ವತಿಯಿಂದ ರಾಹುಲ್ ಗಾಂಧಿ ಹುಟ್ಟುಹಬ್ಬ ಪ್ರಯುಕ್ತ ಶಾಲಾ ಮಕ್ಕಳಿಗೆ ಪಠ್ಯೇತರ ಸಾಮಾಗ್ರಿ ವಿತರಣೆ.

ಸ್ಥಳೀಯ ಸುದ್ದಿರಾಜಕೀಯ

ಧರ್ಮ ಬಸವನಪುರ

6/19/20251 min read

ಕೆ.ಆರ್.ಪುರ: ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರ ಹುಟ್ಟುಹಬ್ಬದ ಅಂಗವಾಗಿ ಕೆ.ಆರ್.ಪುರ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ಪವನ್ ಗೌಡ ಅವರ ನೇತೃತ್ವದಲ್ಲಿ ಎಚ್ ಎ ಎಲ್ ನ ಸರ್ಕಾರಿ ಶಾಲೆಯ ಮಕ್ಕಳಿಗೆ ಪಠ್ಯೇತರ ಸಾಮಾಗ್ರಿಗಳನ್ನು ಮಾಜಿ ಶಾಸಕ ನಾರಾಯಣಸ್ವಾಮಿ ಅವರು ವಿತರಣೆ ಮಾಡಿದರು.

ಮಾಜಿ ಶಾಸಕ ನಾರಾಯಣಸ್ವಾಮಿ ಅವರು ಕೇಂದ್ರ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಹುಟ್ಟುಹಬ್ಬದ ಅಂಗಾವಾಗಿ ಮಕ್ಕಳಿಗೆ ಅವಶ್ಯಕ ಸಾಮಾಗ್ರಿಗಳನ್ನು ವಿತರಣೆ ಮಾಡಲಾಗಿದ್ದು , ಅರ್ಥಪೂರ್ಣವಾಗಿ ಆಚರಣೆ ಮಾಡಲಾಗಿದೆ ಎಂದು ಹೇಳಿದರು.

ಕಾರ್ಯಕ್ರಮ ಯಶಸ್ವಿಗೆ ಸಹಕಾರ ನೀಡಿ ಶ್ರಮಿಸಿದ ಎಚ್.ಎ.ಎಲ್ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಜಾನ್ ಬ್ರೀಟೋ ಅವರಿಗೆ ಕೆ.ಆರ್.ಪುರ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ಪವನ್ ಗೌಡ ಅವರು ಅಭಿನಂಧಿಸಿದರು.

ಈ ಸಂದರ್ಭದಲ್ಲಿ ರಾಜ್ಯ ಯುವ ಕಾಂಗ್ರೆಸ್ ಉಪಾಧ್ಯಕ್ಷೆ ಆರ್‌.ಕೆ. ದಿವ್ಯಾ,ಪೂರ್ವ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಚಲ್, ಕೆ.ಆರ್.ಪುರ ಬ್ಲಾಕ್ ಕಾಂಗ್ರೆಸ್ ಮುಖಂಡ ಆಲ್ವಿನ್, ಉದಯನಗರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ನದೀಮ್ ಸೇರಿದಂತೆ ಯುವ ಕಾಂಗ್ರೆಸ್ ಸಮಿತಿ ಸದಸ್ಯರು ಹಾಗೂ ಮುಖಂಡರು ಉಪಸ್ಥಿತರಿದ್ದರು.